ನವದೆಹಲಿ: ವಿದೇಶಾಂಗ ವ್ಯವಹಾರಗಳ ಸಚಿವ ಎಸ್ ಜೈಶಂಕರ್ ಅವರು ಉಕ್ರೇನ್, ಇಂಡೋ-ಪೆಸಿಫಿಕ್ ಮತ್ತು ಅಫ್ಘಾನಿಸ್ಥಾನ ಸೇರಿದಂತೆ ಪ್ರಾದೇಶಿಕ ಮತ್ತು ಜಾಗತಿಕ ಸಮಸ್ಯೆಗಳ ಕುರಿತು ಭಾರತ ಪ್ರವಾಸದಲ್ಲಿರುವ ಇಟಲಿ ಸಚಿವ ಲುಯಿಗಿ ಡಿ ಮೈಯೊ ಅವರೊಂದಿಗೆ ಚರ್ಚಿಸಿದರು.
ಉಕ್ರೇನ್ನಲ್ಲಿ ನಡೆಯುತ್ತಿರುವ ಮಾನವೀಯ ಬಿಕ್ಕಟ್ಟಿನ ಬಗ್ಗೆ ಉಭಯ ಕಳವಳ ವ್ಯಕ್ತಪಡಿಸಿದ್ದಾರೆ ಮತ್ತು ಯುದ್ಧವನ್ನು ತಕ್ಷಣವೇ ನಿಲ್ಲಿಸುವಂತೆ ಕರೆ ನೀಡಿದ್ದಾರೆ.
“ಸಾರ್ವಭೌಮತ್ವ ಮತ್ತು ಪ್ರಾದೇಶಿಕ ಸಮಗ್ರತೆಗೆ ವಿಶೇಷ ಗೌರವ ನೀಡುವುದರೊಂದಗೆ ಯುಎನ್ ಚಾರ್ಟರ್ ಆಧಾರದ ಮೇಲೆ ಅಂತರಾಷ್ಟ್ರೀಯ ಕ್ರಮವನ್ನು ಕಾಪಾಡುವ ಪ್ರಾಮುಖ್ಯತೆಯನ್ನು ನಾಯಕರು ಒತ್ತಿಹೇಳಿದ್ದಾರೆ” ಎಂದು ಸರ್ಕಾರ ಹೇಳಿಕೆಯಲ್ಲಿ ತಿಳಿಸಿದೆ.
“ರಕ್ಷಣಾ ಕ್ಷೇತ್ರವನ್ನು ಒಳಗೊಂಡಂತೆ ನಿಕಟ ಕೈಗಾರಿಕಾ ಸಹಯೋಗದ ಸಾಮರ್ಥ್ಯವನ್ನು ಉಭಯ ನಾಯಕರು ಗಮನಿಸಿದರು. ಭಯೋತ್ಪಾದನೆ, ಹಿಂಸಾತ್ಮಕ ಉಗ್ರವಾದ ಮತ್ತು ಸೈಬರ್ ಅಪರಾಧಗಳಿಗೆ ಸಂಬಂಧಿಸಿದ ಸಾಮಾನ್ಯ ಸವಾಲುಗಳನ್ನು ಎದುರಿಸಲು ನಿಕಟವಾಗಿ ಕೆಲಸ ಮಾಡುವ ತಮ್ಮ ಬದ್ಧತೆಯನ್ನು ಅವರು ಪುನರುಚ್ಚರಿಸಿದರು” ಎಂದಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.