ನವದೆಹಲಿ: ಹದಗೆಡುತ್ತಿರುವ ಆರ್ಥಿಕ ಬಿಕ್ಕಟ್ಟಿನ ಹಿನ್ನೆಲೆಯಲ್ಲಿ ಶ್ರೀಲಂಕಾದಲ್ಲಿ ಸರ್ಕಾರಿ ವಿರೋಧಿ ಮುಷ್ಕರಗಳು ಮತ್ತು ಪ್ರತಿಭಟನೆಗಳು ತಾರಕಕ್ಕೇರಿದೆ. ಈ ಹಿನ್ನೆಲೆಯಲ್ಲಿ ಮತ್ತೊಮ್ಮೆ ಶ್ರೀಲಂಕಾದಲ್ಲಿ ಅಧ್ಯಕ್ಷ ಗೋತಬಯ ರಾಜಪಕ್ಸೆ ಸರ್ಕಾರ ತುರ್ತು ಪರಿಸ್ಥಿತಿಯನ್ನು ಘೋಷಿಸಿದ್ದಾರೆ.
“ಶ್ರೀಲಂಕಾದಲ್ಲಿ ಸಾರ್ವಜನಿಕ ತುರ್ತು ಪರಿಸ್ಥಿತಿ ಘೋಷಿಸಲಾಗಿದೆ. ಸಾರ್ವಜನಿಕ ಭದ್ರತೆ, ಸಾರ್ವಜನಿಕ ಸುವ್ಯವಸ್ಥೆಯ ರಕ್ಷಣೆ ಮತ್ತು ಸಮುದಾಯದ ಜೀವನಕ್ಕೆ ಅಗತ್ಯವಾದ ಸರಬರಾಜು ಮತ್ತು ಸೇವೆಗಳ ನಿರ್ವಹಣೆಯ ಹಿತಾಸಕ್ತಿಯಿಂದಾಗಿ ಅಧ್ಯಕ್ಷರು ಈ ನಿರ್ಧಾರವನ್ನು ತೆಗೆದುಕೊಂಡಿದ್ದಾರೆ” ಎಂದು ಸರ್ಕಾರಿ ಹೇಳಿಕೆ ತಿಳಿಸಿದೆ.
ತುರ್ತು ಪರಿಸ್ಥಿತಿ ತಕ್ಷಣವೇ ಜಾರಿಗೆ ಬಂದಿದೆ. ಆದರೆ ವಿರೋಧ ಪಕ್ಷಗಳು ಮತ್ತು ಶ್ರೀಲಂಕಾ ಬಾರ್ ಅಸೋಸಿಯೇಷನ್ ಈ ನಿರ್ಧಾರವನ್ನು ವಿರೋಧಿಸಿದೆ.
ರಾಜಪಕ್ಸೆಗೆ ರಾಜೀನಾಮೆ ನೀಡುವಂತೆ ಕರೆ ನೀಡಿದ ವಿರೋಧ ಪಕ್ಷದ ನಾಯಕ ಸಜಿತ್ ಪ್ರೇಮದಾಸ ಅವರು, ತುರ್ತು ಪರಿಸ್ಥಿತಿಯು ಬಿಕ್ಕಟ್ಟಿಗೆ ಯಾವುದೇ ಪರಿಹಾರವನ್ನು ನೀಡುವುದಿಲ್ಲ ಎಂದಿದ್ದಾರೆ.
ರಾಜಪಕ್ಸೆ ಅವರ ನಿರ್ಧಾರದ ಬಗ್ಗೆ ತೀವ್ರ ಕಳವಳ ವ್ಯಕ್ತಪಡಿಸಿದ ಶ್ರೀಲಂಕಾ ಬಾರ್ ಅಸೋಸಿಯೇಷನ್, ಸಾರ್ವಜನಿಕ ಪ್ರತಿಭಟನೆಯನ್ನು ಹತ್ತಿಕ್ಕುವುದು ಬಿಕ್ಕಟ್ಟಿಗೆ ಪರಿಹಾರವಲ್ಲ. ಆದೇಶವನ್ನು ಹಿಂಪಡೆಯಬೇಕು ಎಂದಿದ್ದಾರೆ.
ಈ ಹಿಂದೆಯೂ ತುರ್ತು ಪರಿಸ್ಥಿತಿಯನ್ನು ಘೋಷಿಸಲಾಗಿತ್ತು. ಆದರೆ ಬಳಿಕ ವಿರೋಧಕ್ಕೆ ಮಣಿದು ನಿರ್ಧಾರ ಹಿಂಪಡೆಯಲಾಗಿತ್ತು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.