ನವದೆಹಲಿ: ಕೇಂದ್ರ ಗೃಹ ಸಚಿವಾಲಯವು ಕೇಂದ್ರ ಸಶಸ್ತ್ರ ಪೊಲೀಸ್ ಪಡೆಗಳು (CAPFs) ಮತ್ತು ರಾಷ್ಟ್ರೀಯ ಭದ್ರತಾ ಸಿಬ್ಬಂದಿ (NSG) ಕ್ಯಾಂಪಸ್ಗಳಲ್ಲಿ ಸೌರಶಕ್ತಿ ಫಲಕಗಳನ್ನು ಸ್ಥಾಪಿಸುವ ಪ್ರಸ್ತಾವನೆಯನ್ನು ಪ್ರಾರಂಭಿಸಿದೆ.
ನವದೆಹಲಿಯಲ್ಲಿ ಗೃಹ ಸಚಿವಾಲಯ ಮತ್ತು ಸೋಲಾರ್ ಎನರ್ಜಿ ಕಾರ್ಪೊರೇಷನ್ ಆಫ್ ಇಂಡಿಯಾ ಲಿಮಿಟೆಡ್ (SECI) ನಡುವೆ ತಿಳುವಳಿಕೆ ಒಪ್ಪಂದಕ್ಕೆ ಸಹಿ ಹಾಕಲಾಗಿದೆ.
ಸೌರ ಮೇಲ್ಛಾವಣಿ PV ಪವರ್ ಪ್ಲಾಂಟ್ಗಳ ಸ್ಥಾಪನೆಯನ್ನು ಜಂಟಿಯಾಗಿ ಕೈಗೊಳ್ಳಲು ಎರಡು ಪಕ್ಷಗಳ ನಡುವಿನ ಸಹಯೋಗವನ್ನು ಒಪ್ಪಂದ ಕಲ್ಪಿಸುತ್ತದೆ.
CAPF ಗಳು ಮತ್ತು NSG ಕ್ಯಾಂಪಸ್ಗಳಲ್ಲಿ 71.68 ಮೆಗಾವ್ಯಾಟ್ಗಳ ಒಟ್ಟು ಸೌರಶಕ್ತಿ ಸಾಮರ್ಥ್ಯವನ್ನು SECI ಅಂದಾಜಿಸಿದೆ.
ನವೀಕರಿಸಬಹುದಾದ ಶಕ್ತಿಯನ್ನು ಉತ್ತೇಜಿಸುವ ಮೂಲಕ ಇಂಗಾಲದ ತಟಸ್ಥ ಆರ್ಥಿಕತೆಯತ್ತ ಸಾಗುವ ಕೇಂದ್ರ ಸರ್ಕಾರದ ಪ್ರಯತ್ನಗಳಿಗೆ ಇದು ಒಂದು ಹೆಜ್ಜೆಯಾಗಿದೆ ಎಂದು ವರದಿ ತಿಳಿಸಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.