ಬೆಂಗಳೂರು: ರಾಜ್ಯದಲ್ಲಿ ವಿವಿಧ ಸರಕು ಮತ್ತು ಸೇವೆ ಪಡೆಯಲು ಕರೆಯುವ ಟೆಂಡರ್ ಪ್ರಕ್ರಿಯೆಯಲ್ಲಿ ಪಾರದರ್ಶಕತೆ ಹಾಗೂ ದುಂದು ವೆಚ್ಚಕ್ಕೆ ಕಡಿವಾಣ ಹಾಕುವ ನಿಟ್ಟಿನಲ್ಲಿ ಡಿಸೆಂಬರ್ ನಲ್ಲಿ ಸರ್ಕಾರ ಹೊರಡಿಸಿದ ಆದೇಶದಂತೆ ಉಚ್ಛನ್ಯಾಯಾಲಯದ ನಿವೃತ್ತ ನ್ಯಾಯಾಧೀಶರಾದ ನ್ಯಾಯಮೂರ್ತಿ ರತ್ನಕಲಾ ಅವರ ಅಧ್ಯಕ್ಷತೆಯಲ್ಲಿ ಟೆಂಡರ್ ಪೂರ್ವ ಪರಿಶೀಲನಾ ಸಮಿತಿಯನ್ನು ರಚಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ಜಲ ಸಂಪನ್ಮೂಲ ಇಲಾಖೆಯ ನಿವೃತ್ತ ಕಾರ್ಯದರ್ಶಿ ಬಿ.ಜಿ. ಗುರುಪಾದಸ್ವಾಮಿ (ಎಂಜಿನಿಯರಿಂಗ್ ಪರಿಣತ) ಹಾಗೂ ರಾಜ್ಯ ಲೆಕ್ಕಪತ್ರ ಇಲಾಖೆಯ ನಿವೃತ್ತ ನಿರ್ದೇಶಕ ಕೆ. ನಂದಕುಮಾರ್ (ಹಣಕಾಸು ವಿಷಯ ಪರಿಣತ) ಈ ಸಮಿತಿಯ ಸದಸ್ಯರಾಗಿ ನೇಮಕಗೊಂಡಿದ್ದಾರೆ.
ಈ ಸಮಿತಿಯು ಈಗಾಗಲೇ ಸರ್ಕಾರ ಹೊರಡಿಸಿದ ಮಾರ್ಗಸೂಚಿಗಳಂತೆ 50 ಕೋಟಿ ರೂ. ಗಳಿಗೂ ಹೆಚ್ಚು ಮೊತ್ತದ ಟೆಂಡರು ಗಳು ಪಾರದರ್ಶಕ, ನ್ಯಾಯಸಮ್ಮತವಾಗಿರುವ ಕುರಿತು ಪರಿಶೀಲನೆ ನಡೆಸಲಿದೆ. ಯೋಜನೆಯನ್ನು ರೂಪಿಸಲಾಗಿರುವ ರೀತಿ, ಅದಕ್ಕೆ ತಗುಲುವ ವೆಚ್ಚ ದ ಕುರಿತು ಸಮಿತಿ ಪರಿಶೀಲನೆ ನಡೆಸಲಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.