ನವದೆಹಲಿ: ಒಂದು ರಾಷ್ಟ್ರ, ಒಂದು ಗುಣಮಟ್ಟಕ್ಕಾಗಿ ಸರ್ಕಾರ ಕೆಲಸ ಮಾಡುತ್ತಿದೆ ಎಂದು ಗ್ರಾಹಕ ವ್ಯವಹಾರಗಳು, ಆಹಾರ ಮತ್ತು ಸಾರ್ವಜನಿಕ ವಿತರಣಾ ಸಚಿವ ಪಿಯೂಷ್ ಗೋಯಲ್ ಅವರು ಇಂದು ಹೇಳಿದ್ದಾರೆ.
ಲೀಗಲ್ ಮೆಟ್ರಾಲಜಿ ಆಕ್ಟ್, 2009ರ ರಾಷ್ಟ್ರೀಯ ಕಾರ್ಯಾಗಾರದಲ್ಲಿ ಉದ್ಘಾಟನಾ ಭಾಷಣ ಮಾಡಿದ ಸಚಿವರು, ಭಾರತೀಯ ಉತ್ಪನ್ನಗಳು ಉನ್ನತ ಗುಣಮಟ್ಟದಿಂದ ಕೂಡಿರಬೇಕು. ಗ್ರಾಹಕರ ಹಿತಾಸಕ್ತಿಗಳಿಗೆ ಧಕ್ಕೆಯಾಗದಂತೆ ನೋಡಿಕೊಳ್ಳುವುದು ಸರ್ಕಾರದ ಜವಾಬ್ದಾರಿಯಾಗಿದೆ ಎಂದು ಹೇಳಿದರು.
‘ಒನ್ ನೇಷನ್ ಒನ್ ಸ್ಟ್ಯಾಂಡರ್ಡ್’ ಅನ್ನು ಪ್ರಾರಂಭಿಸಲು ಮತ್ತು ಜಾಗತಿಕ ಮಾನದಂಡಗಳನ್ನು ಹೊಂದಿಸುವಲ್ಲಿ ಭಾರತವನ್ನು ನಾಯಕನನ್ನಾಗಿ ಮಾಡುವ ಸಮಯ ಇದು ಎಂದಿದ್ದಾರೆ.
ಉತ್ಪಾದನೆ ಮತ್ತು ಸೇವೆಗಳ ಎಲ್ಲಾ ಕ್ಷೇತ್ರಗಳನ್ನು ಒಂದು ರಾಷ್ಟ್ರ, ಒಂದು ಗುಣಮಟ್ಟ ರಾಷ್ಟ್ರೀಯ ಮಿಷನ್ನಲ್ಲಿ ಸೇರಿಸಬೇಕು. ಎಲ್ಲಾ ರೀತಿಯ ಸಾರ್ವಜನಿಕ ಸಂಗ್ರಹಣೆ ಮತ್ತು ಟೆಂಡರ್ಗಳಲ್ಲಿ ರಾಷ್ಟ್ರೀಯ ಏಕರೂಪತೆ ಮತ್ತು ಪ್ರಮಾಣೀಕರಣವನ್ನು ತರುವುದು ತಕ್ಷಣದ ಅಗತ್ಯ ಎಂದು ಗೋಯಲ್ ಹೇಳಿದ್ದಾರೆ.
ಭಾರತವು ಉತ್ತಮವಾದದನ್ನು ಪಡೆಯಲು ಇದು ಸಮಯ ಎಂದಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.