ಕೊಲಂಬೊ: ಸಿಂಹಳೀಯರ ನಾಡು ಶ್ರೀಲಂಕಾ ಆರ್ಥಿಕ ಬಿಕ್ಕಟ್ಟಿಗೆ ಅಕ್ಷರಶಃ ನಲುಗಿ ಹೋಗಿದೆ. ಪ್ರಸ್ತುತ ತಲೆದೋರಿರುವ ಆರ್ಥಿಕ ಸಂಕಷ್ಟವನ್ನು ನೀಗಿಸುವಲ್ಲಿ ಅಲ್ಲಿನ ಸರ್ಕಾರ ಸಂಪೂರ್ಣ ವಿಫಲಗೊಂಡು ಜನಾಕ್ರೋಶಕ್ಕೆ ತುತ್ತಾಗಿದೆ.
ಅಲ್ಲಿನ ಜನರ ಪ್ರತಿಭಟನೆಗಳು ತಾರಕಕ್ಕೇರಿದ ಪರಿಣಾಮ ತುರ್ತು ಪರಿಸ್ಥಿತಿ ಕೂಡ ಘೋಷಣೆ ಮಾಡಲಾಗಿದೆ. ಪರಿಸ್ಥಿತಿ ಕೈಮೀರಿದ ಹಿನ್ನೆಲೆಯಲ್ಲಿ ಪ್ರಧಾನಿ ಹುದ್ದೆಗೆ ಮಹಿಂದಾ ರಾಜಪಕ್ಸೆ ಅವರು ರಾಜೀನಾಮೆ ನೀಡಿದ್ದಾರೆ.
ಇತ್ತೀಚಿಗೆ ನಡೆದ ವಿಶೇಷ ಸಂಪುಟ ಸಭೆಯಲ್ಲಿ ಅಧ್ಯಕ್ಷ ಗೋಟಬಯ ರಾಜಪಕ್ಸ ಅವರು ಪ್ರಧಾನಿ ಹುದ್ದೆಗೆ ರಾಜೀನಾಮೆ ನೀಡಲು ಮಹಿಂದಾ ರಾಜಪಕ್ಸೆ ಅವರ ಬಳಿಕ ಮನವಿ ಮಾಡಿದ್ದರು. ಇದಕ್ಕೆ ಮಹಿಂದಾ ರಾಜಪಕ್ಸೆ ಸಮ್ಮತಿ ಸೂಚಿಸಿದ್ದರು. ಅದರಂತೆ ಇಂದು ರಾಜೀನಾಮೆ ನೀಡಿದ್ದಾರೆ.
“ತಕ್ಷಣವೇ ಜಾರಿಗೆ ಬರುವಂತೆ, ನಾನು ನನ್ನ ಪ್ರಧಾನಿ ಸ್ಥಾನಕ್ಕೆ ರಾಜೀನಾಮೆಯನ್ನು ರಾಷ್ಟ್ರಪತಿಗಳಿಗೆ ಸಲ್ಲಿಸಿದ್ದೇನೆ” ಎಂದು ಅವರು ಟ್ವಿಟ್ ಮಾಡಿದ್ದಾರೆ.
Effective immediately I have tendered my resignation as Prime Minister to the President.
අගමැති ධූරයෙන් ඉල්ලා අස්වීමේ ලිපිය ජනාධිපතිතුමා වෙත යොමු කළෙමි.
— Mahinda Rajapaksa (@PresRajapaksa) May 9, 2022
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.