ನವದೆಹಲಿ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ನವದೆಹಲಿಗೆ ತೆರಳಿದ್ದಾರೆ. ನವೆಂಬರ್ನಲ್ಲಿ ನಡೆಯುವ ಇನ್ವೆಸ್ಟ್ ಕರ್ನಾಟಕ-2022 ಬಂಡವಾಳ ಹೂಡಿಕೆ ಸಮಾವೇಶದ ಹಿನ್ನೆಲೆಯಲ್ಲಿ ವಿವಿಧ ರಾಷ್ಟ್ರಗಳ ರಾಯಭಾರಿಗಳು ಮತ್ತು ಹೈಕಮಿಷನರ್ಗಳ ಜೊತೆಗೆ ಅವರು ಸಭೆ ನಡೆಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಮುಖ್ಯಮಂತ್ರಿಗಳು ಕೇಂದ್ರದ ಹಲವು ಸಚಿವರನ್ನು ಭೇಟಿಯಾಗಿ ರಾಜ್ಯದ ವಿಷಯಗಳ ಕುರಿತು ಚರ್ಚಿಸಲಿದ್ದಾರೆ. ಹೈಕಮಾಂಡ್ ನಾಯಕರ ಭೇಟಿಗೂ ಪ್ರಯತ್ನಿಸಲಿದ್ದಾರೆ. ಸಂಜೆ 6 ಗಂಟೆಗೆ ಇನ್ವೆಸ್ಟ್ ಕರ್ನಾಟಕ-2022 ಬಂಡವಾಳ ಹೂಡಿಕೆ ಸಮಾವೇಶದ ಹಿನ್ನೆಲೆಯಲ್ಲಿ ವಿವಿಧ ದೇಶಗಳ ರಾಯಭಾರಿಗಳು ಮತ್ತು ಹೈ ಕಮೀಷನರ್ ಗಳ ಜೊತೆ ಆಯೋಜನೆ ಮಾಡಿರುವ ಸಭೆಯಲ್ಲಿ ಪಾಲ್ಗೊಳ್ಳಲಿದ್ದು ಹೂಡಿಕೆದಾರರ ಸಮಾವೇಶಕ್ಕೆ ಅಧಿಕೃತ ಆಹ್ವಾನ ನೀಡಲಿದ್ದಾರೆ.
ಸಭೆ ನಂತರ ದೆಹಲಿಯ ಕರ್ನಾಟಕ ಭವನದಲ್ಲೇ ವಾಸ್ತವ್ಯ ಹೂಡಲಿದ್ದಾರೆ.
ಮೇ 13ರಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಉತ್ತರ ಪ್ರದೇಶದ ವಾರಣಾಸಿಗೆ ತೆರಳಲಿದ್ದು, ವಾರಣಾಸಿಯ ಜಂಗಮವಾಡಿಮಠದಲ್ಲಿ ನಡೆಯಲಿರುವ ಸನಾತನ ವೀರಶೈವ ಪಂಚಪೀಠಗಳಲ್ಲಿ ಒಂದಾಗಿರುವ ಕಾಶಿ ಪೀಠದ ಉತ್ತರಾಧಿಕಾರಿ ಪಟ್ಟಾಭಿಷೇಕ ಸಮಾರಂಭದಲ್ಲಿ ಭಾಗಿಯಾಗಲಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.