ನವದೆಹಲಿ: ಎಲ್ಲರನ್ನೂ ಒಳಗೊಂಡ ಅಭಿವೃದ್ಧಿಗಾಗಿ ಪ್ರಧಾನಿ ನರೇಂದ್ರ ಮೋದಿಯವರ ನಾಯಕತ್ವವನ್ನು ಕೇಂದ್ರ ಗೃಹ ಸಚಿವ ಅಮಿತ್ ಶಾ ಬುಧವಾರ ಶ್ಲಾಘಿಸಿದ್ದಾರೆ ಮತ್ತು ಈ ದೇಶದ ಜನರು ಮೋದಿ ಮೇಲೆ ಅಪಾರ ನಂಬಿಕೆ ಹೊಂದಿದ್ದಾರೆ ಎಂದಿದ್ದಾರೆ.
“ಭಾರತದ ಜನರು ಪ್ರಧಾನ ಮಂತ್ರಿ ನರೇಂದ್ರ ಮೋದಿಯವರ ನಾಯಕತ್ವದಲ್ಲಿ ಅಪಾರ ನಂಬಿಕೆ ಹೊಂದಿದ್ದಾರೆ ಮತ್ತು ಹೃದಯದಿಂದ ಮೋದಿಯವರನ್ನು ಪ್ರೀತಿಸುತ್ತಾರೆ ಮತ್ತು ಯಾವುದೇ ಕುಟುಂಬದ ಹಿನ್ನೆಲೆಯಿಲ್ಲದೆ ಅವರು ರಾಷ್ಟ್ರದ ನಾಯಕರಾಗಿರುವುದು ಬಹಳ ಮಹತ್ವದ್ದು” ಎಂದಿದ್ದಾರೆ.
ʼಮೋದಿ @ 20: ಡ್ರೀಮ್ಸ್ ಮೀಟ್ ಡೆಲಿವರಿʼ ಪುಸ್ತಕ ಬಿಡುಗಡೆ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ಅವರು, ಮೋದಿಯವರ ನೇತೃತ್ವದಲ್ಲಿ ಬಿಜೆಪಿ ದೇಶದ ಮೂಲೆ ಮೂಲೆಗಳನ್ನು ತಲುಪಿದೆ ಮತ್ತು ಹಿಂದಿ ಮಾತನಾಡುವ ಜನರ ಪಕ್ಷ, ಕೇವಲ ನಗರ ಪ್ರದೇಶಗಳಲ್ಲಿ ಮಾತ್ರ ಪ್ರಭಾವವಿರುವ ಪಕ್ಷ ಎಂಬ ತಪ್ಪು ಕಲ್ಪನೆಯನ್ನು ತೊಡೆದು ಹಾಕಿದೆ ಎಂದಿದ್ದಾರೆ.
ಮೋದಿ ಸರ್ಕಾರವು ಜನರು ಇಷ್ಟಪಡುವ ನಿರ್ಧಾರಗಳನ್ನು ಅಲ್ಲ, ರಾಜಕೀಯ ಲಾಭ ಪರಿಗಣನೆಗೆ ತೆಗೆದುಕೊಳ್ಳದೆ ಜನರಿಗೆ ಒಳ್ಳೆಯದನ್ನು ಮಾಡುವ ನಿರ್ಧಾರ ತೆಗೆದುಕೊಳ್ಳುತ್ತಾರೆ ಎಂದಿದ್ದಾರೆ.
Speaking at the launch of ‘Modi@20: Dreams Meet Delivery’. Watch! #ModiAt20Book https://t.co/jZ0ULst483
— Amit Shah (@AmitShah) May 11, 2022
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.