ನವದೆಹಲಿ: ಬೆಳಗಾವಿಯಲ್ಲಿ 700 ಎಕರೆ ಹುಲ್ಲುಗಾವಲಿನ ಪ್ರದೇಶ ರಕ್ಷಣಾ ಇಲಾಖೆಯ ಸುಪರ್ದಿಯಲ್ಲಿದೆ. ಅದು ರಾಜ್ಯ ಸರ್ಕಾರದ ಜಮೀನು. ಈ ಪ್ರದೇಶವನ್ನು ರಾಜ್ಯಕ್ಕೆ ಹಸ್ತಾಂತರಿಸುವಂತೆ ಮನವಿ ಮಾಡಲಾಗಿದೆ. ಇದಕ್ಕೆ ಕೇಂದ್ರ ರಕ್ಷಣಾ ಸಚಿವ ರಾಜನಾಥಸಿಂಗ್ ಅವರು ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.
ಅವರು ನವದೆಹಲಿಯಲ್ಲಿ ಕೇಂದ್ರ ರಕ್ಷಣಾ ಸಚಿವ ರಾಜನಾಥಸಿಂಗ್ ಅವರನ್ನು ಭೇಟಿ ಮಾಡಿದ ಸಂದರ್ಭದಲ್ಲಿ ಈ ವಿಚಾರ ಪ್ರಸ್ತಾಪಿಸಲಾಯಿತು ಎಂದರು.
ಬೆಳಗಾವಿಯಲ್ಲಿ ಐ.ಟಿ ಪಾರ್ಕ್ ಮಾಡುವ ಉದ್ದೇಶವಿದೆ. ಅದಕ್ಕೆ ಈ ಜಮೀನನ್ನು ರಾಜ್ಯ ಸರ್ಕಾರ ತನ್ನ ಸುಪರ್ದಿಗೆ ಪಡೆಯಬೇಕಾಗುದೆ. ಅದಕ್ಕಾಗಿ ಈ ಜಮೀನನ್ನು ರಾಜ್ಯ ಸರ್ಕಾರಕ್ಕೆ ಹಸ್ತಾಂತರಿಸಿ ಎಂದು ಮನವಿ ಮಾಡಿಕೊಳ್ಳಲಾಯಿತು. ಇದಕ್ಕೆ ಸಕಾರಾತ್ಮಕ ವಾಗಿ ಸ್ಪಂದಿಸಿದ ಸಿಂಗ್ ಅವರು, ಸಂಬಂಧಪಟ್ಟವರ ಜತೆ ಮಾತನಾಡಿ ವರದಿ ತರಿಸಿಕೊಂಡು ತೀರ್ಮಾನ ಮಾಡುವುದಾಗಿ ತಿಳಿಸಿದ್ದಾರೆ ಎಂದು ಮುಖ್ಯಮಂತ್ರಿಗಳು ಹೇಳಿದರು.
ಬೆಳಗಾವಿಯಲ್ಲಿರುವ ಸಂಗೊಳ್ಳಿ ರಾಯಣ್ಣ ಮಿಲಿಟರಿ ಶಾಲೆ ಬಗ್ಗೆ ಅವಧಿ ವಿಸ್ತರಣೆಗೆ ಕೋರಲಾಗಿದ್ದ ಹಿನ್ನೆಲೆಯಲ್ಲಿ ವಿಸ್ತರಣೆ ನೀಡಿದ್ದಾರೆ. ಶಾಲೆಯ ಉದ್ಘಾಟನೆಗೆ ಕೇಂದ್ರ ರಕ್ಷಣಾ ಸಚಿವರನ್ನು ಆಹ್ವಾನಿಸಲಾಯಿತು ಎಂದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.