ನವದೆಹಲಿ: ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಇಂದು ಸಂಜೆ ಯುಎಸ್ ಅಧ್ಯಕ್ಷ ಜೋ ಬೈಡೆನ್ ಅವರ ಆಹ್ವಾನದ ಮೇರೆಗೆ ಎರಡನೇ ಜಾಗತಿಕ ಕೋವಿಡ್ ವರ್ಚುವಲ್ ಶೃಂಗಸಭೆಯಲ್ಲಿ ಭಾಗವಹಿಸಲಿದ್ದಾರೆ.
ಶೃಂಗಸಭೆಯು ಕೋವಿಡ್ ಸಾಂಕ್ರಾಮಿಕದ ಮುಂದುವರಿದ ಸವಾಲುಗಳನ್ನು ಪರಿಹರಿಸಲು ಮತ್ತು ಬಲವಾದ ಜಾಗತಿಕ ಆರೋಗ್ಯ ಭದ್ರತೆಯನ್ನು ನಿರ್ಮಿಸಲು ಹೊಸ ಕ್ರಮಗಳನ್ನು ಉತ್ತೇಜಿಸಲು ಉದ್ದೇಶಿಸಿದೆ. ವಿಶ್ವಸಂಸ್ಥೆಯ ಪ್ರಧಾನ ಕಾರ್ಯದರ್ಶಿ, ವಿಶ್ವ ಆರೋಗ್ಯ ಸಂಸ್ಥೆಯ ಮಹಾನಿರ್ದೇಶಕರು ಮತ್ತು ಇತರ ಗಣ್ಯರು ಶೃಂಗಸಭೆಯಲ್ಲಿ ಭಾಗವಹಿಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಸುರಕ್ಷಿತ ಮತ್ತು ಕೈಗೆಟುಕುವ ಲಸಿಕೆಗಳು, ಔಷಧಗಳು, ಕಡಿಮೆ ವೆಚ್ಚದ ಸ್ಥಳೀಯ ತಂತ್ರಜ್ಞಾನಗಳ ಅಭಿವೃದ್ಧಿ ಮತ್ತು ಆರೋಗ್ಯ ಕಾರ್ಯಕರ್ತರ ಸಾಮರ್ಥ್ಯವನ್ನು ಹೆಚ್ಚಿಸುವ ಮೂಲಕ ಸಾಂಕ್ರಾಮಿಕ ರೋಗವನ್ನು ಎದುರಿಸಲು ನಡೆಯುತ್ತಿರುವ ಜಾಗತಿಕ ಪ್ರಯತ್ನಗಳಲ್ಲಿ ಭಾರತ ಪ್ರಮುಖ ಪಾತ್ರ ವಹಿಸುತ್ತಿದೆ. ವಿಶ್ವ ಆರೋಗ್ಯ ಸಂಸ್ಥೆಯನ್ನು ತನ್ನ ಕೇಂದ್ರದಲ್ಲಿಟ್ಟುಕೊಂಡು ಜಾಗತಿಕ ಆರೋಗ್ಯ ಭದ್ರತೆಯನ್ನು ಬಲಪಡಿಸುವ ಮತ್ತು ಸುಧಾರಿಸುವ ಉದ್ದೇಶದಿಂದ ಭಾರತ ಬಹುಪಕ್ಷೀಯ ವೇದಿಕೆಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದೆ.
ಪ್ರಧಾನಿ ಮೋದಿ ಅವರು ಶೃಂಗಸಭೆಯ ಆರಂಭಿಕ ಅಧಿವೇಶನದಲ್ಲಿ ತಮ್ಮ ಭಾಷಣವನ್ನು ಮಾಡಲಿದ್ದಾರೆ. ಸಾಂಕ್ರಾಮಿಕದಿಂದ ಉಂಟಾದ ಒತ್ತಡವನ್ನು ತಡೆಗಟ್ಟುವುದು ಮತ್ತು ಸಿದ್ಧತೆಗೆ ಆದ್ಯತೆ ನೀಡುವತ್ತ ಅವರ ಮಾತು ಕೇಂದ್ರೀಕೃತವಾಗಿರಲಿದೆ.
ಕಳೆದ ವರ್ಷ ಸೆಪ್ಟೆಂಬರ್ನಲ್ಲಿ ಅಧ್ಯಕ್ಷ ಬೈಡೆನ್ ಆಯೋಜಿಸಿದ್ದ ಮೊದಲ ಜಾಗತಿಕ ಕೋವಿಡ್ ವರ್ಚುವಲ್ ಶೃಂಗಸಭೆಯಲ್ಲಿ ಮೋದಿ ಭಾಗವಹಿಸಿದ್ದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.