ನವದೆಹಲಿ: ಗ್ಯಾನವಪಿ ಮಸೀದಿ ಸಮೀಕ್ಷೆಗೆ ಸಂಬಂಧಿಸಿದಂತೆ ನ್ಯಾಯಾಲಯ ಮಹತ್ವದ ಆದೇಶವನ್ನು ನೀಡಿದ್ದು, ಮಸೀದಿಯ ವಿಡಿಯೋ ಸಮೀಕ್ಷೆ ಮುಂದುವರೆಯಲಿದೆ ಎಂದು ತೀರ್ಪು ನೀಡಿದೆ.
ಶೃಂಗಾರ ಗೌರಿ, ಗಣೇಶ, ಹನುಮಾನ್ ಮತ್ತು ನಂದಿ ವಿಗ್ರಹಗಳನ್ನು ಪ್ರತಿನಿತ್ಯ ಪೂಜೆ ಮಾಡಲು ಅನುಮತಿ ಕೋರಿ ದೆಹಲಿ ಮಹಿಳೆಯರು ಸಲ್ಲಿಸಿದ ಮನವಿಯ ಮೇರೆಗೆ ಸಿವಿಲ್ ನ್ಯಾಯಾಧೀಶ ರವಿಕುಮಾರ್ ದಿವಾಕರ್ ಅವರು ಗ್ಯಾನವಪಿ ಮಸೀದಿಯ ವೀಡಿಯೋಗ್ರಫಿ ಮತ್ತು ಸಮೀಕ್ಷೆಗೆ ಆದೇಶಿಸಿದ್ದರು.
ಮಸೀದಿ ಸಂಕೀರ್ಣದ ಪಶ್ಚಿಮ ಗೋಡೆಯ ಹಿಂಭಾಗದಲ್ಲಿರುವ ಹಿಂದೂ ದೇಗುಲದಲ್ಲಿ ವರ್ಷಪೂರ್ತಿ ಪ್ರಾರ್ಥನೆ ಸಲ್ಲಿಸಲು ಅವಕಾಶ ನೀಡಬೇಕು ಎಂದು ಐದು ಹಿಂದೂ ಮಹಿಳೆಯರು ಸಲ್ಲಿಸಿದ ಅರ್ಜಿಗಳ ಹಿನ್ನೆಲೆಯಲ್ಲಿ ನ್ಯಾಯಾಲಯವು ಈ ವರ್ಷದ ಏಪ್ರಿಲ್ನಲ್ಲಿ ಪರಿಶೀಲನೆಗೆ ಆದೇಶಿಸಿತ್ತು. ಪ್ರಸ್ತುತ ಈ ತಾಣವನ್ನು ವರ್ಷಕ್ಕೊಮ್ಮೆ ಪ್ರಾರ್ಥನೆಗಾಗಿ ತೆರೆಯಲಾಗಿದೆ.
ಕಳೆದ ಶುಕ್ರವಾರದಂದು ಸಮೀಕ್ಷೆ ಆರಂಭಗೊಂಡಿದ್ದರೂ ಮಸೀದಿಯೊಳಗೆ ವೀಡಿಯೋಗ್ರಫಿ ವಿವಾದ ಭುಗಿಲೆದ್ದ ಕಾರಣ ಈ ಕಾರ್ಯ ಪೂರ್ಣಗೊಂಡಿಲ್ಲ.
ಸಮೀಕ್ಷೆಯ ಮೇಲ್ವಿಚಾರಣಾ ಆಯುಕ್ತರನ್ನು ಬದಲಾಯಿಸದಿರಲು ನಿರ್ಧರಿಸಲಾಗಿದೆ ಎಂದು ನ್ಯಾಯಾಲಯ ಇಂದು ಹೇಳಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.