ನವದೆಹಲಿ: ಮುಂದಿನ ಮುಖ್ಯ ಚುನಾವಣಾ ಆಯುಕ್ತರಾಗಿ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ಅವರನ್ನು ಗುರುವಾರ ನೇಮಕ ಮಾಡಲಾಗಿದೆ. ಮೇ 14 ರಂದು ಹಾಲಿ ಸುಶೀಲ್ ಚಂದ್ರ ಅಧಿಕಾರ ತ್ಯಜಿಸಿದ ನಂತರ ಕುಮಾರ್ ಅವರು ಮೇ 15 ರಂದು ಅಧಿಕಾರ ವಹಿಸಿಕೊಳ್ಳಲಿದ್ದಾರೆ ಎಂದು ಕಾನೂನು ಸಚಿವಾಲಯ ಹೊರಡಿಸಿದ ಅಧಿಸೂಚನೆ ತಿಳಿಸಿದೆ.
ಅಧಿಸೂಚನೆಯನ್ನು ಸಾರ್ವಜನಿಕವಾಗಿ ಬಹಿರಂಗಪಡಿಸಿದ ಕಾನೂನು ಸಚಿವ ಕಿರಣ್ ರಿಜಿಜು ಅವರು ರಾಜೀವ್ ಕುಮಾರ್ ಅವರಿಗೆ ಶುಭ ಹಾರೈಸಿದರು.
ಜಾರ್ಖಂಡ್ ಕೇಡರ್ನ 1984 ಬ್ಯಾಚ್ನ ಐಎಎಸ್ ಅಧಿಕಾರಿಯಾಗಿರುವ ರಾಜೀವ್ ಕುಮಾರ್ ಅವರನ್ನು ಆಗಸ್ಟ್ 2020 ರಲ್ಲಿ ಚುನಾವಣಾ ಆಯುಕ್ತರಾಗಿ ನೇಮಿಸಲಾಯಿತು.
ಕುಮಾರ್ ಅವರು ತಮ್ಮ ತವರು ರಾಜ್ಯವಾದ ಜಾರ್ಖಂಡ್ನಲ್ಲಿ ಆಡಳಿತಾತ್ಮಕ ಹುದ್ದೆಗಳು ಸೇರಿದಂತೆ ವಿವಿಧ ಪ್ರಮುಖ ಕಾರ್ಯಯೋಜನೆಗಳನ್ನು ನಿರ್ವಹಿಸಿದ್ದಾರೆ. 30 ವರ್ಷಗಳ ಸೇವೆಯಲ್ಲಿ ವ್ಯಾಪಕವಾದ ಆಡಳಿತಾತ್ಮಕ ಅನುಭವವನ್ನು ಅವರು ಹೊಂದಿದ್ದಾರೆ. ಅವರು ಕೇಂದ್ರ ಸರ್ಕಾರದಲ್ಲಿ ವಿವಿಧ ಹುದ್ದೆಗಳಲ್ಲಿ ಕೆಲಸ ಮಾಡಿದ್ದಾರೆ.
ಕುಮಾರ್ ಅವರನ್ನು ಮಾರ್ಚ್ 19, 2012 ರಿಂದ ಮಾರ್ಚ್ 12, 2015 ರವರೆಗೆ ಹಣಕಾಸು ಸಚಿವಾಲಯದ ವೆಚ್ಚ ಇಲಾಖೆಯ ಜಂಟಿ ಕಾರ್ಯದರ್ಶಿ ಮತ್ತು ಹೆಚ್ಚುವರಿ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸಿದ್ದಾರೆ.
ನಂತರ ಅವರು ಮಾರ್ಚ್ 12, 2015 ರಿಂದ ಆಗಸ್ಟ್ 30, 2017 ರವರೆಗೆ ಸಿಬ್ಬಂದಿ ಸಾರ್ವಜನಿಕ ಕುಂದುಕೊರತೆಗಳು ಮತ್ತು ಪಿಂಚಣಿ, ತರಬೇತಿ ಸಚಿವಾಲಯದ ಸ್ಥಾಪನಾ ಅಧಿಕಾರಿ ಮತ್ತು ಹೆಚ್ಚುವರಿ/ವಿಶೇಷ ಕಾರ್ಯದರ್ಶಿಯಾಗಿ ಅಧಿಕಾರ ವಹಿಸಿಕೊಂಡರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.