ಬೆಂಗಳೂರು: ನಾಳೆ ಬೆಂಗಳೂರಿನಲ್ಲಿ ರಾಜ್ಯ ಬಿಜೆಪಿ ಕೋರ್ ಕಮಿಟಿ ಸಭೆ ನಡೆಯಲಿದ್ದು, ಇದೇ ಸಭೆಯಲ್ಲಿ ವಿಧಾನ ಪರಿಷತ್ ಹಾಗೂ ರಾಜ್ಯ ಸಭೆಗೆ ನಡೆಯಲಿರುವ ಚುನಾವಣೆ ಬಗ್ಗೆ ಚರ್ಚೆ ನಡೆಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
ಇಂದು ಬೆಂಗಳೂರಿನ ತಮ್ಮ ನಿವಾಸದ ಬಳಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು,
ನಿನ್ನೆ ರಾಜ್ಯ ಬಿಜೆಪಿ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರ ಜತೆ ಈ ವಿಚಾರ ಚರ್ಚೆ ಆಗಿದೆ. ಕೋರ್ ಕಮಿಟಿ ಸಭೆಯಲ್ಲಿ ಈ ಬಗ್ಗೆ ಸಮಗ್ರವಾಗಿ ಚರ್ಚೆ ನಡೆಯಲಿದೆ ಎಂದು ಅವರು ಹೇಳಿದರು.
ಹಿಂದುಳಿದ ವರ್ಗಗಳ ಮೀಸಲಾತಿಗೆ ಸಂಬಂಧಿಸಿದಂತೆ ಬಿಬಿಎಂಪಿ ಪ್ರಕರಣ ಸರ್ವೋಚ್ಚ ನ್ಯಾಯಾಲಯದಲ್ಲಿ ವಿಚಾರಣೆಗೆ ಬಾಕಿ ಇದೆ. ಜಿಲ್ಲಾ ಪಂಚಾಯತ್ ಹಾಗೂ ತಾಲ್ಲೂಕು ಪಂಚಾಯತ್ ಬಗ್ಗೆ ಕಾನೂನಾತ್ಮಕವಾಗಿ ಹಾಗೂ ಸಂವಿಧಾನಾತ್ಮಕವಾಗಿ ಒಬಿಸಿ ಮೀಸಲಾತಿ ಮಾಡಲೇಬೇಕಿದೆ. ಅದಕ್ಕೆ ಈಗಾಗಲೇ ರಚಿಸಲಾಗಿರುವ ಸಮಿತಿ ತನ್ನ ವರದಿ ಸಲ್ಲಿಸಲು ಸಮಯಾವಕಾಶ ನೀಡುವಂತೆ ಅಥವಾ ಹಳೆಯ ಮೀಸಲಾತಿ ಪ್ರಕಾರ ಚುನಾವಣೆ ಮಾಡಲು ಅವಕಾಶ ನೀಡುವಂತೆ ಕೋರಲಾಗಿದೆ. ಇದಕ್ಕೆ ಬಹುತೇಕ ಅವಕಾಶ ಸಿಗುವ ಭರವಸೆ ಇದೆ ಎಂದು ಬೊಮ್ಮಾಯಿ ತಿಳಿಸಿದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.