ನವದೆಹಲಿ: ವೈದ್ಯಕೀಯ ಪ್ರವಾಸೋದ್ಯಮವನ್ನು ಮತ್ತಷ್ಟು ಉತ್ತೇಜಿಸುವ ಉದ್ದೇಶದಿಂದ ಕೇಂದ್ರ ಸರ್ಕಾರ ‘ಹೀಲ್ ಇನ್ ಇಂಡಿಯಾ’ ಕಾರ್ಯಕ್ರಮವನ್ನು ಪ್ರಾರಂಭಿಸಿದೆ.
ಈ ಬಗ್ಗೆ ಟ್ವಿಟ್ ಮಾಡಿರುವ ಕೇಂದ್ರ ಆರೋಗ್ಯ ಸಚಿವ ಮನ್ಸೂಖ್ ಮಾಂಡವೀಯಾ ಅವರು, “ಸರ್ಕಾರವು ಪ್ರಧಾನ ಮಂತ್ರಿಯವರ ನೇತೃತ್ವದಲ್ಲಿ ವೈದ್ಯಕೀಯ ಪ್ರವಾಸೋದ್ಯಮವನ್ನು ಮತ್ತಷ್ಟು ಉತ್ತೇಜಿಸುವ ಉದ್ದೇಶದಿಂದ ʼಹೀಲ್ ಇನ್ ಇಂಡಿಯಾʼ ಕಾರ್ಯಕ್ರಮವನ್ನು ಪ್ರಾರಂಭಿಸಿದೆ” ಎಂದಿದ್ದಾರೆ.
ಭಾರತದ ವೈದ್ಯಕೀಯ ಕ್ಷೇತ್ರವು ಬಲಿಷ್ಠವಾಗಿದ್ದು, ಅತ್ಯಾಧುನಿಕ ತಂತ್ರಜ್ಞಾನವನ್ನು ಹೊಂದಿದೆ. ಹೀಗಾಗಿ ಭಾರತದಲ್ಲಿ ಚಿಕಿತ್ಸೆ ಪಡೆಯುವಂತೆ ಜಗತ್ತಿನ ಜನರನ್ನು ಉತೇಜಿಸುವ ಉದ್ದೇಶವನ್ನು ಈ ಯೋಜನೆ ಹೊಂದಿದೆ.
“ಇಂದು ಪ್ರಪಂಚದ ವಿವಿಧ ದೇಶಗಳ ಜನರು ಹೆಚ್ಚಿನ ಸಂಖ್ಯೆಯಲ್ಲಿ ಚಿಕಿತ್ಸೆಗಾಗಿ ಭಾರತಕ್ಕೆ ಬರುತ್ತಿದ್ದಾರೆ. ವೈದ್ಯಕೀಯ ಪ್ರವಾಸೋದ್ಯಮವನ್ನು ಮತ್ತಷ್ಟು ಉತ್ತೇಜಿಸುವ ಉದ್ದೇಶದಿಂದ, ಭಾರತ ಸರ್ಕಾರವು ಪ್ರಧಾನ ಮಂತ್ರಿಯವರ ನೇತೃತ್ವದಲ್ಲಿ ‘ಹೀಲ್ ಇನ್ ಇಂಡಿಯಾ’ ಕಾರ್ಯಕ್ರಮವನ್ನು ಪ್ರಾರಂಭಿಸಿದೆ. ಅದೇ ರೀತಿ ‘ಹೀಲ್ ಬೈ ಇಂಡಿಯಾ’ ಕಾರ್ಯಕ್ರಮವನ್ನು ಕೂಡ ಆರಂಭಿಸಿದ್ದೇವೆ. ಇದು ನಮ್ಮ ವೈದ್ಯಕೀಯ ಕಾರ್ಯಪಡೆಗೆ ಪ್ರಪಂಚದಾದ್ಯಂತ ಪ್ರಯಾಣಿಸಲು ಮತ್ತು ಆರೋಗ್ಯಕರ ಜಾಗತಿಕ ಸಮಾಜಕ್ಕೆ ಕೊಡುಗೆ ನೀಡಲು ಅವಕಾಶವನ್ನು ಒದಗಿಸುತ್ತದೆ. ನಮ್ಮ ಸಾಂಪ್ರದಾಯಿಕ ಔಷಧ ಉದ್ಯಮವನ್ನು ಮತ್ತಷ್ಟು ಬಲಪಡಿಸುವ ಮೂಲಕ ಭಾರತವನ್ನು ಜಾಗತಿಕ ವೈದ್ಯಕೀಯ ಮೌಲ್ಯ ಕೇಂದ್ರವನ್ನಾಗಿ ಮಾಡಲು ನಾವು ಬದ್ಧರಾಗಿದ್ದೇವೆ ಮತ್ತು ‘ಹೀಲ್ ಇನ್ ಇಂಡಿಯಾ’ ಮತ್ತು ‘ಹೀಲ್ ಬೈ ಇಂಡಿಯಾ’ ಉಪಕ್ರಮಗಳನ್ನು ಉತ್ತೇಜಿಸುತ್ತೇವೆ” ಎಂದು ಅವರು ಹೇಳಿದರು.
With an aim to further boost medical tourism, the Government has launched the ‘Heal in India’ programme under the leadership of PM @NarendraModi Ji: Minister Dr @MansukhMandviya pic.twitter.com/WaJIxOAojd
— Office of Dr Mansukh Mandaviya (@OfficeOf_MM) May 13, 2022
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.