ನವದೆಹಲಿ: ತ್ರಿಪುರಾದ 12ನೇ ಮುಖ್ಯಮಂತ್ರಿಯಾಗಿ ಡಾ. ಮಾಣಿಕ್ ಸಹಾ ಇಂದು ಪ್ರಮಾಣ ವಚನ ಸ್ವೀಕಾರ ಮಾಡಿದ್ದಾರೆ.
ಅಗರ್ತಲಾದ ರಾಜಭವನದಲ್ಲಿ ನಡೆದ ನೂತನ ಸಿಎಂಗೆ ರಾಜ್ಯಪಾಲ ಸತ್ಯದೇವ್ ನಾರಾಯಣ ಆರ್ಯ ಪ್ರಮಾಣ ವಚನ ಬೋಧಿಸಿದರು.
ನಿರ್ಗಮಿತ ಸಿಎಂ ಬಿಪ್ಲಬ್ ಕುಮಾರ್ ದೇವ್, ಎಂಒಎಸ್ ಪ್ರತಿಮಾ ಭೌಮಿಕ್, ಕೇಂದ್ರ ಸಚಿವ ಭೂಪೇಂದರ್ ಯಾದವ್, ಎನ್ಇ ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿ ಅಜಯ್ ಜಮ್ವಾಲ್ ಮತ್ತು ಇತರ ಕೇಂದ್ರ ನಾಯಕರು, ರಾಜ್ಯ ಬಿಜೆಪಿ ಸಚಿವರು, ಶಾಸಕರು ಮತ್ತು ಸರ್ಕಾರದ ಉನ್ನತ ಅಧಿಕಾರಿಗಳು ಪ್ರಮಾಣ ವಚನ ಸಮಾರಂಭದಲ್ಲಿ ಉಪಸ್ಥಿತರಿದ್ದರು.
ತ್ರಿಪುರಾ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಡಾ ಮಾಣಿಕ್ ಸಹಾ ಅವರನ್ನು ಪ್ರಧಾನಿ ನರೇಂದ್ರ ಮೋದಿ ಅಭಿನಂದಿಸಿದ್ದಾರೆ.
ಟ್ವೀಟ್ ಮಾಡಿರುವ ಮೋದಿ, 2018ರಲ್ಲಿ ಆರಂಭವಾದ ತ್ರಿಪುರಾದ ಅಭಿವೃದ್ಧಿ ಪಯಣಕ್ಕೆ ಡಾ ಸಹಾ ಅವರು ಚೈತನ್ಯ ತುಂಬುತ್ತಾರೆ ಎಂಬ ವಿಶ್ವಾಸವಿದೆ ಎಂದಿದ್ದಾರೆ.
Congratulations to Shri @DrManikSaha2 on taking oath as Tripura’s CM. Best wishes to him for a fruitful tenure. I am confident he will add vigour to the development journey of Tripura which began in 2018.
— Narendra Modi (@narendramodi) May 15, 2022
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.