ನವದೆಹಲಿ: ವಿಡಿಯೋ ಸಮೀಕ್ಷೆಗ ಒಳಪಟ್ಟಿರುವ ಗ್ಯಾನವಾಪಿ ಮಸೀದಿಯಲ್ಲಿ ಮಹತ್ವದ ಸುಳಿವುಗಳು ಸಿಗುತ್ತಿವೆ. ಮಸೀದಿ ಆವರಣದಲ್ಲಿನ ಕೊಳದಲ್ಲಿ ಶಿವಲಿಂಗ ಪತ್ತೆಯಾಗಿದೆ.
ಉತ್ತರ ಪ್ರದೇಶದ ವಾರಣಾಸಿಯಲ್ಲಿರುವ ಗ್ಯಾನವಾಪಿ ಮಸೀದಿ ಸಂಕೀರ್ಣದ ಮೂರು ದಿನಗಳ ವೀಡಿಯೋಗ್ರಾಫಿ ಸಮೀಕ್ಷೆಯು ನ್ಯಾಯಾಲಯದಲ್ಲಿ ಮುಂದಿನ ವಿಚಾರಣೆಗೆ ಒಂದು ದಿನ ಮುಂಚಿತವಾಗಿ ಇಂದು ಕೊನೆಗೊಂಡಿದೆ.
ಮಸೀದಿ ಸಂಕೀರ್ಣದ ಒಳಗಿರುವ ಕೊಳದಲ್ಲಿ ಶಿವಲಿಂಗ ಕಂಡುಬಂದಿದೆ ಎಂದು ವಕೀಲರೊಬ್ಬರು ಹೇಳಿದ್ದಾರೆ. “ಕೊಳವನ್ನು ಶುದ್ಧೀಕರಣ ಆಚರಣೆಗಳಿಗೆ ಬಳಸಲಾಗುತ್ತಿತ್ತು. ಕೊಳದಿಂದ ನೀರನ್ನು ಬತ್ತಿಸಿದಾಗ ಶಿವಲಿಂಗವು ಕಂಡುಬಂದಿದೆ” ಎಂದು ವಕೀಲ ಸುಭಾಷ್ ನಂದನ್ ಚತುರ್ವೇದಿ ಹೇಳಿದ್ದಾರೆ.
ಈ ಹಿನ್ನೆಲೆಯಲ್ಲಿ ವಾರಣಾಸಿಯ ನ್ಯಾಯಾಲಯವು ಗ್ಯಾನವಾಪಿ ಮಸೀದಿ ಸಂಕೀರ್ಣದಲ್ಲಿನ ಕೊಳವನ್ನು ವಶಪಡಿಸಿಕೊಳ್ಳಲು ಆದೇಶಿಸಿದೆ.
ಸಂಕೀರ್ಣದ ಬಳಿ ಬಿಗಿ ಭದ್ರತೆ ಮತ್ತು ನಿರ್ಬಂಧಗಳ ನಡುವೆ ಇಂದು ಬೆಳಿಗ್ಗೆ ಕೊನೆಯ ದಿನದ ಚಿತ್ರೀಕರಣ ಪ್ರಾರಂಭವಾಯಿತು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.