ನವದೆಹಲಿ: ಜಮ್ಮು ಕಾಶ್ಮೀರದ ಮುಖ್ಯಮಂತ್ರಿ ಮುಫ್ತಿ ಮೊಹಮ್ಮದ್ ಸಯ್ಯದ್ ಅವರು ಮಂಗಳವಾರ ಪ್ರಧಾನಿ ನರೇಂದ್ರ ಮೋದಿಯವರನ್ನು ಭೇಟಿ ಮಾಡಿ ತಮ್ಮ ರಾಜ್ಯದ ಸ್ಥಿತಿಗತಿಗಳ ಬಗ್ಗೆ ವಿವರಿಸಿದರು.
ಮಾರ್ಚ್ 1 ರಂದು ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ಮೇಲೆ ಇದು ಪ್ರಧಾನಿಯವರೊಂದಿಗ ಮುಫ್ತಿ ಅವರ ಮೊದಲ ಅಧಿಕೃತ ಭೇಟಿಯಾಗಿದೆ. ಬಳಿಕ ಅವರಯು ಗೃಹ ಸಚಿವ ರಾಜನಾಥ್ ಸಿಂಗ್ ಅವರನ್ನು ಭೇಟಿಯಾಗಿ ಚರ್ಚೆ ನಡೆಸಿದರು.
ಭೇಟಿಯ ವೇಳೆಯಲ್ಲಿ ರಾಜ್ಯದ ಕಾನೂನು ಸುವ್ಯವಸ್ಥೆ ಹಾಗು ಪೋಲಿಸ್ ಪಡೆಗಳ ಮೇಲೆ ನಡೆದ ಭಯೋತ್ಪಾದನಾ ದಾಳಿಯ ಮುಫ್ತಿ ವಿವರಿಸಿದರು ಎನ್ನಲಾಗಿದೆ.
ಕೇಂದ್ರ ಸಂಪುಟ ಶೀಘ್ರದಲ್ಲಿ ವಿಸ್ತರಣೆಯಾಗಿದ್ದು, ಈ ವೇಳೆ ಪಿಡಿಪಿ ಸದಸ್ಯರಿಗೆ ಸ್ಥಾನ ಸಿಗಲಿದೆ ಎಂದು ಮೂಲಗಳು ತಿಳಿಸಿವೆ. ಮುಫ್ತಿಯವರ ಪಿಡಿಪಿ ಪಕ್ಷ ಜಮ್ಮು ಕಾಶ್ಮೀರದಲ್ಲಿ ಬಿಜೆಪಿಯ ಮೈತ್ರಿ ಪಕ್ಷವಾಗಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.