ಬೆಂಗಳೂರು: ಮಳೆಯಿಂದ ತೊಂದರೆಗೆ ಒಳಗಾಗಿರುವ ಬಾಧಿತ ಪ್ರದೇಶಗಳಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಇಂದು ಭೇಟಿ ನೀಡಿ ಪರಿಶೀಲಿಸಿದರು.
ರಾಜರಾಜೇಶ್ವರಿ ನಗರ ವಿಧಾನಸಭಾ ಕ್ಷೇತ್ರದ ಐಡಿಯಲ್ ಬಡಾವಣೆಯ ಜನವಸತಿ ಪ್ರದೇಶದಲ್ಲಿ ಪರಿಶೀಲನೆ ಮಾಡಿದರು.
ಬಳಿಕ ಮುಖ್ಯಮಂತ್ರಿ, ರಾಜರಾಜೇಶ್ವರಿ ನಗರ ಬಡಾವಣೆಯಲ್ಲಿ ಸುಮಾರು 20 ಕಡೆಗಳಲ್ಲಿ ಸರಾಗವಾಗಿ ಮಳೆ ನೀರು ಹರಿಯಲು ಅಡೆತಡೆಗಳಿದ್ದು, ತಕ್ಷಣವೇ ಕಾಮಗಾರಿ ಕೈಗೆತ್ತಿಕೊಳ್ಳುವಂತೆ ನಿರ್ದೇಶನ ನೀಡಲಾಗಿದೆ. ತಗ್ಗು ಪ್ರದೇಶಗಳಲ್ಲಿ ತೊಂದರೆಗೊಳಗಾದವರ ರಕ್ಷಣೆಗೆ ಸರ್ಕಾರ ಆದ್ಯತೆ ನೀಡಿದೆ. ಮಳೆಯಿಂದ ಹಾನಿಗೊಳಗಾದವರಿಗೆ 25 ಸಾವಿರ ರೂ. ಪರಿಹಾರ ಹಾಗೂ ಮೃತಪಟ್ಟ ಕುಟುಂಬಕ್ಕೆ 5 ಲಕ್ಷ ನೀಡಲಾಗುವುದು ಎಂದರು.
ರಾಜಕಾಲುವೆ ಒತ್ತುವರಿ ಮಾಡಿಕೊಂಡು ಮನೆ ನಿರ್ಮಿಸುತ್ತಿರುವವರ ಮೇಲೆ ಕ್ರಮ ತೆಗೆದುಕೊಳ್ಳಲಾಗುವುದು, ಕೆಲವೇ ಕೆಲವು ಜನರಿಂದ ನಗರ ಪ್ರದೇಶದಲ್ಲಿ ತೊಂದರೆ ಎದುರಾಗುವುದು ಸರಿಯಲ್ಲ, ತೆರವು ಕಾರ್ಯಚರಣೆಗೆ ನಿರ್ದಾಕ್ಷಣ್ಯವಾಗಿ ಕ್ರಮ ತೆಗೆದುಕೊಳ್ಳಲಾಗುವುದು ಎಂದರು.
ಮುಖ್ಯಮಂತ್ರಿ @BSBommai ಅವರು ಬೆಂಗಳೂರಿನಲ್ಲಿ ನಿನ್ನೆ ಸುರಿದ ಭಾರಿ ಮಳೆಯಿಂದಾಗಿ ತೊಂದರೆಗೊಳಗಾದ ಜನವಸತಿ ಪ್ರದೇಶಗಳಿಗೆ ಭೇಟಿ ನೀಡಿ ಸ್ಥಳ ಪರಿಶೀಲನೆ ನಡೆಸಿದರು.
ಈ ಸಂದರ್ಭದಲ್ಲಿ ಸಚಿವರಾದ @MunirathnaMLA, @RAshokaBJP, ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ @CTRavi_BJP ಸೇರಿದಂತೆ ಇತರರು ಉಪಸ್ಥಿತರಿದ್ದರು. pic.twitter.com/t82O8JCdL1
— CM of Karnataka (@CMofKarnataka) May 18, 2022
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.