ಬೆಂಗಳೂರು: ವಿಧಾನ ಪರಿಷತ್ನ ಮಾಜಿ ಸಭಾಪತಿ ಬಸವರಾಜ ಹೊರಟ್ಟಿ ಅವರು ಇಂದು ಅಧಿಕೃತವಾಗಿ ಬಿಜೆಪಿಯನ್ನು ಸೇರ್ಪಡೆಗೊಂಡಿದ್ದಾರೆ.
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಸಮ್ಮುಖದಲ್ಲಿ ಬಿಜೆಪಿಯನ್ನು ಸೇರ್ಪಡೆಗೊಂಡಿದ್ದು, ಪಕ್ಷದ ಧ್ವಜವನ್ನು ನೀಡಿ ಅವರನ್ನು ಬರಮಾಡಿಕೊಳ್ಳಲಾಯಿತು.
ಈ ಬಗ್ಗೆ ಟ್ವೀಟ್ ಮಾಡಿರುವ ಮುಖ್ಯಮಂತ್ರಿ, “ಮಾಜಿ ವಿಧಾನಪರಿಷತ್ ಸಭಾಪತಿ, ಜೆಡಿಎಸ್ ಪಕ್ಷದ ಹಿರಿಯ ನಾಯಕರಾದ ಶ್ರೀ ಬಸವರಾಜ ಹೊರಟ್ಟಿ ಅವರು ಇಂದು ಅಧಿಕೃತವಾಗಿ ಬಿಜೆಪಿಗೆ ಸೇರ್ಪಡೆಗೊಂಡರು, ಅವರಿಗೆ ಪಕ್ಷದ ಧ್ವಜ ನೀಡಿ ಸ್ವಾಗತಿಸಲಾಯಿತು” ಎಂದಿದ್ದಾರೆ.
ಮಾಜಿ ವಿಧಾನಪರಿಷತ್ ಸಭಾಪತಿ, ಜೆಡಿಎಸ್ ಪಕ್ಷದ ಹಿರಿಯ ನಾಯಕರಾದ ಶ್ರೀ ಬಸವರಾಜ ಹೊರಟ್ಟಿ ಅವರು ಇಂದು ಅಧಿಕೃತವಾಗಿ @BJP4Karnataka ಸೇರಿದರು. ಅವರಿಗೆ ಪಕ್ಷದ ಧ್ವಜ ನೀಡಿ ಸ್ವಾಗತಿಸಲಾಯಿತು.
ಈ ಸಂದರ್ಭಧಲ್ಲಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ @CTRavi_BJP, ಮಾಜಿ ಮುಖ್ಯಮಂತ್ರಿ @JagadishShettar, ಸಚಿವರಾದ @GovindKarjol,
1/2 pic.twitter.com/EiUEB2A7v4— Basavaraj S Bommai (@BSBommai) May 18, 2022
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.