ಕುಂದಾಪುರ : ರೈತರ ಆತ್ಮಹತ್ಯೆ ಪ್ರಕರಣಗಳು, ರೈತರ ಬೆಳೆ ಹಾನಿ, ಅನಿಯಮಿತ ವಿದ್ಯುತ್ ನಿಲುಗಡೆ ಮೊದಲಾದ ಸಮಸ್ಯೆಗಳಿಂದ ರೈತರ ಸಮಸ್ಯೆಗಳಿಗೆ ಪರಿಹಾರಕಂಡುಕೊಳ್ಳುವಲ್ಲಿ ಸರಕಾರ ತಕ್ಷಣ ವಿಶೇಷ ಅಧಿವೇಶನವನ್ನು ಕರೆಯಬೇಕು. ಆ ಮೂಲಕ ರೈತರ ಸಂಕಷ್ಟಗಳನ್ನು ಪರಿಹರಿಸುವ ಹಾಗೂ ಅವರಲ್ಲಿ ಆತ್ಮ ವಿಶ್ವಾಸ ಮೂಡಿಸುವ ಪ್ರಯತ್ನಗಳು ನಡೆಯಬೇಕು ಎಂದು ವಿಧಾನ ಪರಿಷತ್ ಸದಸ್ಯ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು.
ಅವರು ಕುಂದಾಪುರ ಪ್ರೆಸ್ ಕ್ಲಬ್ನಲ್ಲಿ ನಡೆದ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು ಕಳೆದ ಹಲವಾರು ದಿನದಿಂದ ರಾಜ್ಯದಲ್ಲಿ ವಿವಿಧ ಸಮಸ್ಯೆಯ ಸುಳಿಯಲ್ಲಿ ಸಿಲುಕಿದ ಸುಮಾರು ಮುನ್ನೂರಕ್ಕೂ ಅಧಿಕ ರೈತರು ಆತ್ಮಹತ್ಯೆಗೆ ಶರಣಾಗಿದ್ದಾರೆ. ಈ ಸಂದರ್ಭದಲ್ಲಿ ಸರಕಾರ ಅವರಲ್ಲಿ ವಿಶ್ವಾಸ ಆತ್ಮಮೂಡಿಸುವಲ್ಲಿ ವಿಫಲವಾಗಿದೆ. ಈ ಹಂತದಲ್ಲಿ ರೈತರಲ್ಲಿ ವಿಶ್ವಾಸ ಮೂಡಿಸಿ, ನೊಂದ ರೈತರ ಮನೆಗೆ ಭೇಟಿ ನೀಡಿ ಸಾಂತ್ವಾನ ಹೇಳುವುದು ಹಾಗೂ ರೈತರಿಗಾದ ನಷ್ಟಗಳ ಬಗ್ಗೆ ಅಂದಾಜು ಮಾಡುವುದು, ಅವರ ಬೆಳೆ ಹಾನಿಗೆ ಪರಿಹಾರಕೊಂಡು ಕೊಳ್ಳವ ನಿಟ್ಟಿನಲ್ಲಿ ಹಾಗೂ ಸರಕಾರಕ್ಕೆ ಈ ಬಗ್ಗೆ ಚುರುಕು ಮತ್ತು ಜಾಗೃತಿ ಉಂಟುಮಾಡುವ ನಿಟ್ಟಿನಲ್ಲಿ ಬಿಜೆಪಿ ರೈತ ಚೈತನ್ಯ ಯಾತ್ರೆಯನ್ನು ಹಮ್ಮಿಕೊಂಡಿದೆ.
ಈ ಯಾತ್ರೆಯು ಸೆ. 11 ರಂದು ಉಡುಪಿಗೆ ಆಗಮಿಸಲಿದೆ ಎಂದರು. ರಾಜ್ಯದಲ್ಲಿ ಒಂದು ಕಡೆಯಿಂದ ಮಾಜಿ ಮುಖ್ಯಮಂತ್ರಿ ಬಿ.,ಎಸ್.ಯಡಿಯೂರಪ್ಪ ಅವರು ಹಾಗೂ ಇನ್ನೊಂದು ಕಡೆಯಿಂದ ರಾಜ್ಯಾಧ್ಯಕ್ಷ ಪ್ರಹ್ಲಾದ್ ಜೋಷಿ ಅವರು ಈ ಯಾತ್ರೆಗೆ ಚಾಲನೆ ನೀಡಲಿದ್ದು, ಸೆ.೧೧ರಂದು ಉಡುಪಿ ಜಿಲ್ಲೆಗೆ ಪ್ರಹ್ಲಾದ್ ಜೋಷಿ ಅವರ ನೇತ್ರತ್ವದ ತಂಡ ರೈತಚೈತನ್ಯ ಯಾತ್ರೆಯೊಂದಿಗೆ ಆಗಮಿಸಲಿದ್ದಾರೆ. ಅಂದು ಉಡುಪಿಯಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಸುಮಾರು ೧೫ ಸಾವಿರ ಮಂದಿ ಕಾರ್ಯಕರ್ತರು ಭಾಗವಹಿಸಲಿದ್ದು ಕುಂದಾಪುರದಿಂದ ಸುಮಾರು ಎರಡು ಸಾವಿರ ಮಂದಿ ಭಾಗವಹಿಸಲಿದ್ದಾರೆ ಎಂದು ಹೇಳಿದರು.
ಸರಕಾರ ನಿದ್ರೆಯಲ್ಲಿದೆ. ನಿದ್ರೆಯಲ್ಲಿರುವ ಸರಕಾರವನ್ನು ಎಚ್ಚರಿಸಿ ಜಾಗೃತಸ್ಥಿತಿಗೆ ತರಬೇಕು ಎನ್ನುವುದು ಬಿಜೆಪಿಯ ಉದ್ದೇಶ. ರೈತರಲ್ಲಿ ಆತ್ಮವಿಶ್ವಾಸ ತುಂಬಿ ಅವರ ಬದುಕಿಗೆ ಕಾಯಕಲ್ಪನೀಡ ಬೇಕೆಂಬುದೇ ಈ ರೈತ ಚೈತನ್ಯ ಯಾತ್ರೆ ಮುಖ್ಯ ಉದ್ದೇಶವಾಗಿದೆ ಎಂದರು.
ಸುದ್ದಿಗೋಷ್ಟಿಯಲ್ಲಿ ಕುಂದಾಪುರ ಬಿಜೆಪಿ ಕ್ಷೇತ್ರಾಧ್ಯಕ್ಷ ರಾಜೇಶ್ ಕಾವೇರಿ, ಜಿಲ್ಲಾ ಬಿಜೆಪಿ ಉಪಾಧ್ಯಕ್ಷ ವಸಂತ ಬೆಳ್ವೆ, ಮೀನುಗಾರರ ಪ್ರಕೋಷ್ಟದ ರಾಜ್ಯ ಸಂಚಾಲಕ ಕಿಶೋರ್ ಕುಮಾರ್, ಪ್ರಧಾನ ಕಾರ್ಯದರ್ಶಿ ರಾಜೀವ ಶೆಟ್ಟಿ, ಯುವಮೋರ್ಚಾ ಜಿಲ್ಲಾ ಕಾರ್ಯದರ್ಶಿ ಮಹೇಶ್ , ಕುಂದಾಪುರ ಯುವಮೋರ್ಚಾ ಅಧ್ಯಕ್ಷ ಶಂಕರ ಅಂಕದಕಟ್ಟೆ ಮೊದಲಾದವರು ಉಪಸ್ಥಿತರಿದ್ದರು
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.