ನವದೆಹಲಿ: ಪ್ರಧಾನ ಮಂತ್ರಿ ಗತಿಶಕ್ತಿ ರಾಷ್ಟ್ರೀಯ ಮಾಸ್ಟರ್ ಪ್ಲಾನ್ ಅಡಿಯಲ್ಲಿ ಸುಮಾರು 400 ಸಮಗ್ರ ಜಿಐಎಸ್ ಆಧಾರಿತ ನಕ್ಷೆಗಳನ್ನು ಈಗಾಗಲೇ ಸಿದ್ಧಪಡಿಸಲಾಗಿದೆ ಎಂದು ಕೇಂದ್ರ ಮತ್ತು ಕೈಗಾರಿಕಾ ಸಚಿವ ಪಿಯೂಷ್ ಗೋಯಲ್ ಅವರು ಇಂದು ಹೇಳಿದ್ದಾರೆ.
ನವದೆಹಲಿಯಲ್ಲಿ ನಡೆದ ಟೆಲಿಕಾಂ ರೆಗ್ಯುಲೇಟರಿ ಅಥಾರಿಟಿ ಆಫ್ ಇಂಡಿಯಾ- ಟ್ರಾಯ್ನ ಅಧಿವೇಶನದಲ್ಲಿ ಪ್ರಧಾನ ಭಾಷಣ ಮಾಡಿದ ಗೋಯಲ್, ಗತಿಶಕ್ತಿ ಉಪಕ್ರಮವು ದೇಶದಲ್ಲಿ ಮೂಲಸೌಕರ್ಯಗಳ ಅವ್ಯವಸ್ಥಿತ ಅಭಿವೃದ್ಧಿಯ ಸಮಸ್ಯೆಯನ್ನು ಪರಿಹರಿಸಲು ಸಹಾಯ ಮಾಡುತ್ತದೆ ಮತ್ತು ಮೂಲಸೌಕರ್ಯ ಯೋಜನೆಯಲ್ಲಿ ಸುರಕ್ಷಿತ, ಸುಸ್ಥಿರ ಮತ್ತು ಸಹಕಾರಿ ವಿಧಾನ ತರುತ್ತದೆ ಎಂದಿದ್ದಾರೆ.
ದೇಶವು ಸ್ವಾತಂತ್ರ್ಯದ 75 ವರ್ಷಗಳನ್ನು ಪೂರೈಸಿದ ಆಜಾದಿ ಕಾ ಅಮೃತ್ ಮಹೋತ್ಸವವನ್ನು ಆಚರಿಸುತ್ತಿರುವ ಸಂದರ್ಭದಲ್ಲಿ ರಾಷ್ಟ್ರದ ಸೇವೆಯಲ್ಲಿ 25 ವರ್ಷಗಳನ್ನು ಪೂರೈಸಿದ್ದಕ್ಕಾಗಿ ಸಚಿವರು ಟ್ರಾಯ್ ಅನ್ನು ಅಭಿನಂದಿಸಿದರು.
ಕಳೆದ ಕೆಲವು ವರ್ಷಗಳಲ್ಲಿ ಟೆಲಿಕಾಂ ವಲಯವು ಸಾಧಿಸಿದ ಗಮನಾರ್ಹ ಪ್ರಗತಿಯ ಬಗ್ಗೆ, ವಿಶೇಷವಾಗಿ ಡಿಜಿಟಲ್ ವಿಭಜನೆಯನ್ನು ಕಡಿಮೆ ಮಾಡುವಲ್ಲಿ, ಮಾಹಿತಿ ತಂತ್ರಜ್ಞಾನ ಮತ್ತು ಕೊನೆಯ ಮೈಲಿ ಡಿಜಿಟಲ್ ಸಂಪರ್ಕವು ಪ್ರತಿಯೊಂದು ವಲಯದ ಮೇಲೆ ಪ್ರಭಾವ ಬೀರುತ್ತದೆ ಮತ್ತು ಭಾರತದ ಅಡಿಪಾಯವಾಗಲಿದೆ ಎಂದು ಸಚಿವರು ವಿಶ್ವಾಸ ವ್ಯಕ್ತಪಡಿಸಿದರು. ಮುಂಬರುವ ವರ್ಷಗಳಲ್ಲಿ ಡಿಜಿಟಲ್ ಇಂಡಿಯಾ ಆತ್ಮನಿರ್ಭರ ಭಾರತಕ್ಕೆ ಅಡಿಪಾಯವನ್ನು ರೂಪಿಸುತ್ತದೆ ಎಂದು ಅವರು ಹೇಳಿದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.