ಬೆಂಗಳೂರು: ಕರ್ನಾಟಕದಲ್ಲಿ ಏಮ್ಸ್ ಸಂಸ್ಥೆಯನ್ನು ಸ್ಥಾಪಿಸಲು ಸರಕಾರ ಮಾಡಿರುವ ಮನವಿಗೆ ಕೇಂದ್ರ ಆರೋಗ್ಯ ಸಚಿವರು ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ ಎಂದು ಆರೋಗ್ಯ ಸಚಿವ ಡಾ. ಕೆ ಸುಧಾಕರ್ ಅವರು ತಿಳಿಸಿದ್ದಾರೆ.
ರಾಜ್ಯದಲ್ಲಿ ಏಮ್ಸ್ ಸ್ಥಾಪನೆ ಕುರಿತು ಮಾಂಡವೀಯಾ ಅವರನ್ನು ಭೇಟಿಯಾಗಿ ಮನವಿ ಸಲ್ಲಿಸಿದ ಬಳಿಕ ಅವರು ಈ ಬಗ್ಗೆ ಮಾತನಾಡಿದ್ದಾರೆ.
ರಾಜ್ಯದಲ್ಲಿ ಆರೋಗ್ಯ ಕ್ಷೇತ್ರವನ್ನು ಮತ್ತಷ್ಟು ಬಲಪಡಿಸಲು ಏಮ್ಸ್ ಸಂಸ್ಥೆಯ ಅಗತ್ಯವಿದೆ. ಅಲ್ಲದೇ, ವೈದ್ಯರಾಗುವ ಕನಸು ಹೊತ್ತ ವಿದ್ಯಾರ್ಥಿಗಳಿಗೆ ಉತ್ತಮ ಅವಕಾಶ ಕೂಡ ಸಿಗುತ್ತದೆ ಎಂದು ಅವರು ಪ್ರತಿಪಾದಿಸಿದ್ದಾರೆ.
ಏಮ್ಸ್ ಸ್ಥಾಪನೆ ಕುರಿತು ಸಕಾರಾತ್ಮಕವಾಗಿ ಸ್ಪಂದಿಸಿರುವ ಪ್ರಧಾನಿ ನರೇಂದ್ರ ಮೋದಿ ಮತ್ತು ಆರೋಗ್ಯ ಸಚಿವರಿಗೆ ಧನ್ಯವಾದ ಅರ್ಪಿಸುತ್ತೇನೆ ಎಂದಿದ್ದಾರೆ.
ಮಾಂಡವೀಯಾ ಅವರನ್ನು ಭೇಟಿಯಾದ ಸಂದರ್ಭದಲ್ಲಿ ನಿಮಾನ್ಸ್ ಸಂಸ್ಥೆಯ ಹೊಸ ಕ್ಯಾಂಪಸ್ ನಿರ್ಮಾಣ ಕುರಿತು ಚರ್ಚೆ ನಡೆಸಲಾಯಿತು ಎಂದಿದ್ದಾರೆ.
ಇಂದು ಕೇಂದ್ರ ಆರೋಗ್ಯ ಸಚಿವರಾದ ಶ್ರೀ @mansukhmandviya ಅವರನ್ನು ಭೇಟಿಯಾಗಿ ಚರ್ಚೆ ನಡೆಸಿದ ನಂತರ ರಾಜ್ಯ ಆರೋಗ್ಯ ಇಲಾಖೆಯಲ್ಲಿ ಮತ್ತೊಂದು ಮೈಲಿಗಲ್ಲು ಸ್ಥಾಪನೆಯಾಗಿದೆ. ರಾಜ್ಯಕ್ಕೆ ಏಮ್ಸ್ ಮಂಜೂರು ಮಾಡಿದ್ದ ಮನವಿಗೆ ಕೇಂದ್ರದಿಂದ ಸಕಾರಾತ್ಮಕ ಸ್ಪಂದನೆ ಸಿಕ್ಕಿದೆ.
1/3 pic.twitter.com/kC4KCg2FBg
— Dr Sudhakar K (@mla_sudhakar) May 18, 2022
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.