ಬೆಂಗಳೂರು: 2021-22ನೇ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆ ಫಲಿತಾಂಶ ಇಂದು ಪ್ರಕಟವಾಗಿದೆ. ಶೇ. 85.63ರಷ್ಟು ಮಕ್ಕಳು ಉತ್ತೀರ್ಣರಾಗಿದ್ದಾರೆ. ಇದು ಕಳೆದ 10 ವರ್ಷಗಳಲ್ಲಿ ದಾಖಲೆಯ ಫಲಿತಾಂಶವಾಗಿದೆ.
ಮಾರ್ಚ್ 28 ರಿಂದ ಏಪ್ರಿಲ್ 11 ರವರಗೆ 2022 ನೇ ಸಾಲಿನ ಎಸ್ಎಸ್ಎಲ್ಸಿ ವಾರ್ಷಿಕ ಪರೀಕ್ಷೆ ನಡೆದಿತ್ತು. ಈ ಬಾರಿ ರಾಜ್ಯದಲ್ಲಿ ಎಸ್ಎಸ್ಎಲ್ಸಿ ಮುಖ್ಯ ಪರೀಕ್ಷೆಗೆ 15,387 ಶಾಲೆಗಳಿಂದ 8,73,884 ವಿದ್ಯಾರ್ಥಿಗಳು ನೋಂದಾಯಿಸಿಕೊಂಡಿದ್ದರು. ಅದರಲ್ಲಿ 4,52,732 ವಿದ್ಯಾರ್ಥಿಗಳು, 4,21,110 ವಿದ್ಯಾರ್ಥಿನಿಯರು ಮತ್ತು 4 ತೃತೀಯ ಲಿಂಗಿ ವಿದ್ಯಾರ್ಥಿಗಳು. ಅಲ್ಲದೆ ವಿಭಿನ್ನ ಸಾಮರ್ಥ್ಯವುಳ್ಳ 5,307 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದರು.
ಪರೀಕ್ಷೆಗೆ ಹಾಜರಾಗಿದ್ದ, 8,73,884 ವಿದ್ಯಾರ್ಥಿಗಳ ಪೈಕಿ 7,30,881 ಮಂದಿ ಉತ್ತೀರ್ಣರಾಗಿದ್ದಾರೆ. ಇದರಲ್ಲಿ 40,061 ಮಂದಿ ಗ್ರೇಸ್ ಮಾರ್ಕ್ ಮೂಲಕ ಪಾಸ್ ಆಗಿದ್ದಾರೆ. ಈ ಬಾರಿಯೂ ಬಾಲಕಿಯರೇ ಮೇಲುಗೈ ಸಾಧಿಸಿದ್ದಾರೆ.
ಒಟ್ಟು 145 ಮಂದಿ ಈ ಬಾರಿ 625ಕ್ಕೆ 625 ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದಿದ್ದಾರೆ.
https://karresults.nic.in/ ಗೆ ಭೇಟಿ ನೀಡಿ ವಿದ್ಯಾರ್ಥಿಗಳು ಫಲಿತಾಂಶ ನೋಡಹುದು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.