ನವದೆಹಲಿ: ಜಪಾನ್ ಪ್ರಧಾನಿ ಫುಮಿಯೊ ಕಿಶಿಡಾ ಅವರ ಆಹ್ವಾನದ ಮೇರೆಗೆ ಪ್ರಧಾನಿ ನರೇಂದ್ರ ಮೋದಿ ಇದೇ ತಿಂಗಳ 24 ರಂದು ಟೋಕಿಯೊದಲ್ಲಿ ಕ್ವಾಡ್ ಲೀಡರ್ಸ್ ಶೃಂಗಸಭೆಯಲ್ಲಿ ಭಾಗವಹಿಸಲಿದ್ದಾರೆ. ಅಮೆರಿಕ ಅಧ್ಯಕ್ಷ ಜೋ ಬೈಬಿಡನ್, ಆಸ್ಟ್ರೇಲಿಯಾ ಪ್ರಧಾನಿ ಸ್ಕಾಟ್ ಮಾರಿಸನ್ ಮತ್ತು ಜಪಾನ್ ಪ್ರಧಾನಿ ಫ್ಯೂಮಿಯೊ ಕಿಶಿಡಾ ಅವರು ಕೂಡ ಇದರಲ್ಲಿ ಭಾಗವಹಿಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ.
ವಿದೇಶಾಂಗ ವ್ಯವಹಾರಗಳ ಸಚಿವಾಲಯದ ವಕ್ತಾರ ಅರಿಂದಮ್ ಬಾಗ್ಚಿ ನಿನ್ನೆ ಸಂಜೆ ನವದೆಹಲಿಯಲ್ಲಿ ಮಾಧ್ಯಮಗೋಷ್ಠಿಯಲ್ಲಿ ಶೃಂಗಸಭೆಯ ಕುರಿತು ಮಾಹಿತಿ ನೀಡಿದರು.
ಪ್ರಧಾನಿ ಮೋದಿ ಅವರು ಜಪಾನ್ ಪ್ರಧಾನಿ ಫ್ಯೂಮಿಯೊ ಕಿಶಿಡಾ ಅವರೊಂದಿಗೆ ದ್ವಿಪಕ್ಷೀಯ ಸಭೆ ನಡೆಸಲಿದ್ದಾರೆ ಎಂದು ಬಾಗ್ಚಿ ಹೇಳಿದ್ದಾರೆ.
ಭೇಟಿಯ ಸಮಯದಲ್ಲಿ, ಮೋದಿ ಅವರು ಜಪಾನಿನ ಉದ್ಯಮಿಗಳೊಂದಿಗೆ ಕಾರ್ಯಕ್ರಮಗಳಲ್ಲಿ ಭಾಗವಹಿಸುತ್ತಾರೆ. ಅವರು ಜಪಾನ್ನಲ್ಲಿರುವ ಭಾರತೀಯ ಸಮುದಾಯವನ್ನು ಉದ್ದೇಶಿಸಿ ಸಂವಾದ ನಡೆಸಲಿದ್ದಾರೆ ಎಂದಿದ್ದಾರೆ.
ಪ್ರಧಾನಿಯವರು ಅಮೆರಿಕ ಅಧ್ಯಕ್ಷ ಜೋ ಬೈಡನ್ ಮತ್ತು ಆಸ್ಟ್ರೇಲಿಯಾ ಪ್ರಧಾನಿ ಸ್ಕಾಟ್ ಮಾರಿಸನ್ ಅವರೊಂದಿಗೆ ದ್ವಿಪಕ್ಷೀಯ ಸಭೆಗಳನ್ನು ನಡೆಸುವ ಸಾಧ್ಯತೆಯಿದೆ ಇದೆ ಎಂದು ಮಾಹಿತಿ ನೀಡಿದ್ದಾರೆ.
ಬೈಡೆನ್ ಅವರೊಂದಿಗೆ, ಮೋದಿ ಭಾರತ-ಯುಎಸ್ ಕಾರ್ಯತಂತ್ರದ ಪಾಲುದಾರಿಕೆಯನ್ನು ಪರಿಶೀಲಿಸುವ ನಿರೀಕ್ಷೆಯಿದೆ.
ಮೋದಿ ಮತ್ತು ಮಾರಿಸನ್ ಅವರು ಭಾರತ-ಆಸ್ಟ್ರೇಲಿಯಾ ಸಮಗ್ರ ಕಾರ್ಯತಂತ್ರದ ಪಾಲುದಾರಿಕೆಯನ್ನು ಪರಿಶೀಲಿಸುವ ಸಾಧ್ಯತೆಯಿದೆ ಮತ್ತು ಜಾಗತಿಕ ಮತ್ತು ಪ್ರಾದೇಶಿಕ ಬೆಳವಣಿಗೆಗಳ ಕುರಿತು ಅಭಿಪ್ರಾಯಗಳನ್ನು ವಿನಿಮಯ ಮಾಡಿಕೊಳ್ಳುತ್ತಾರೆ ಎಂದು ಬಾಗ್ಚಿ ತಿಳಿಸಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.