ಬೆಂಗಳೂರು: ಪ್ರತಿ ವರ್ಷ ಜೂನ್ 21 ಅನ್ನು ವಿಶ್ವ ಯೋಗ ದಿನವನ್ನಾಗಿ ಆಚರಣೆ ಮಾಡಲಾಗುತ್ತದೆ. ಈ ಬಾರಿ ಪ್ರಧಾನಿ ನರೇಂದ್ರ ಮೋದಿಯವರು ಯೋಗ ದಿನಾಚರಣೆಯಲ್ಲಿ ಭಾಗವಹಿಸಲು ಮೈಸೂರಿಗೆ ಆಗಮಿಸಲಿದ್ದಾರೆ.
ಮೋದಿ ಮೈಸೂರಿಗೆ ಆಗಮಿಸುವುದನ್ನು ಪ್ರಧಾನಿ ಕಾರ್ಯಾಲಯ ಖಚಿತಪಡಿಸಿದೆ.
ವಿಶ್ವ ಯೋಗ ದಿನಾಚರಣೆಯಲ್ಲಿ ಭಾಗವಹಿಸಲು ಮೈಸೂರಿಗೆ ಮೋದಿ ಆಗಮಿಸುತ್ತಿರುವುದನ್ನು ಎಂದು ಪ್ರಧಾನ ಮಂತ್ರಿ ಕಾರ್ಯಾಲಯ ಖಚಿತಪಡಿಸಿರುವುದನ್ನು ಸಂಸದ ಪ್ರತಾಪ್ ಸಿಂಹ ತಮ್ಮ ಟ್ವಿಟರ್ ಖಾತೆಯಲ್ಲಿ ಹಾಕಿಕೊಂಡಿದ್ದಾರೆ.
ಪ್ರಧಾನ ಮಂತ್ರಿ ಕಾರ್ಯಾಲಯವು ಈಗಾಗಲೇ ರಾಜ್ಯ ಸರ್ಕಾರಕ್ಕೆ ಈ ಕುರಿತು ಪತ್ರ ಬರೆದಿದೆ.
2014 ರಲ್ಲಿ ವಿಶ್ವಸಂಸ್ಥೆ ಅಂಗೀಕರಿಸಿದ ಬಳಿಕ 2015 ರಿಂದ ಜೂನ್ 21 ರಂದು ಅಂತಾರಾಷ್ಟ್ರೀಯ ಯೋಗ ದಿನವನ್ನು ವಾರ್ಷಿಕವಾಗಿ ಆಚರಿಸಲಾಗುತ್ತದೆ. ಯೋಗವು ಭಾರತದಲ್ಲಿ ಸೃಜಿಸಿದ ದೈಹಿಕ, ಮಾನಸಿಕ ಮತ್ತು ಆಧ್ಯಾತ್ಮಿಕ ಅಭ್ಯಾಸವಾಗಿದ್ದು, ಜಾಗತಿಕವಾಗಿ ಇದು ಇದು ಮನ್ನಣೆ ಗಳಿಸಿದ ಅಭ್ಯಾಸವಾಗಿದೆ.
Beloved PM @narendramodi ji, welcome to NAMMA #Mysuru! Honoured!! Thank u so much Sir. pic.twitter.com/74y1UXQfHJ
— Pratap Simha (@mepratap) May 20, 2022
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.