ನವದೆಹಲಿ: ಏಕ ಶ್ರೇಣಿ, ಏಕ ಪಿಂಚಣಿ ಯೋಜನೆಯನ್ನು ಜಾರಿಗೊಳಿಸುವಂತೆ ಆಗ್ರಹಿಸಿ ಕಳೆದ ಹಲವಾರು ವರ್ಷಗಳಿಂದ ಮಾಜಿ ಸೈನಿಕರು ಮಾಡಿಕೊಂಡು ಬರುತ್ತಿರುವ ಹೋರಾಟಕ್ಕೆ ಕೊನೆಗೂ ಜಯವಾಗಿದೆ. ಕೇಂದ್ರ ಸರ್ಕಾರ ಯೋಜನೆಯನ್ನು ಜಾರಿಗೊಳಿಸುವ ಘೋಷಣೆ ಮಾಡಿದೆ.
ರಕ್ಷಣಾ ಸಚಿವ ಮನೋಹರ್ ಪರಿಕ್ಕರ್ ಅವರು ಏಕ ಶ್ರೇಣಿ, ಏಕ ಪಿಂಚಣಿ ಯೋಜನೆಯನ್ನು ಜಾರಿಗೊಳಿಸುವುದಾಗಿ ಶನಿವಾರ ಘೋಷಣೆ ಮಾಡಿದ್ದಾರೆ.
ಜುಲೈ 1, 2014ಕ್ಕೆ ಪೂರ್ವಾನ್ವಯವಾಗುವಂತೆ ಈ ಯೋಜನೆಯನ್ನು ಜಾರಿಗೊಳಿಸಲಾಗುತ್ತಿದೆ. ಪ್ರತಿ 5 ವರ್ಷಗಳಿಗೊಮ್ಮೆ ಪಿಂಚಣಿಯನ್ನು ಪರಿಷ್ಕರಣೆ ಮಾಡಲಾಗುತ್ತದೆ. ಈ ಯೋಜನೆ ಜಾರಿಗೆ 8 ಸಾವಿರದಿಂದ 12 ಸಾವಿರ ಕೋಟಿ ವೆಚ್ಚವಾಗಲಿದೆ ಎಂದರು.
ಹಣಕಾಸಿನ ಹೊರೆಯಾದರೂ ಸರ್ಕಾರ ಮಾಜಿ ಸೈನಿಕರ ಹಿತರಕ್ಷಣೆಯನ್ನು ಕಾಪಾಡಲು ಬದ್ಧವಾಗಿದೆ ಎಂದು ಅವರು ಹೇಳಿದ್ದಾರೆ.
ಸದ್ಯ ದೇಶದಲ್ಲಿ 24.25 ಲಕ್ಷ ಮಾಜಿ ಸೈನಿಕರಿದ್ದು, 16 ಲಕ್ಷ ಹುತಾತ್ಮ ಯೋಧರ ವಿಧವೆಯರಿದ್ದಾರೆ. ಇವರ ಪಿಂಚಣಿಗೆ ಈಗ ತಗಲುತ್ತಿರುವ ವೆಚ್ಚ 54 ಸಾವಿರ ಕೋಟಿ. ಇದೀಗ ಏಕ ಶ್ರೇಣಿ, ಏಕ ಪಿಂಚಣಿ ಯೋಜನೆ ಜಾರಿಯಾದ ಹಿನ್ನಲೆಯಲ್ಲಿ ಇದರ ಮೊತ್ತ 75 ಸಾವಿರ ಕೋಟಿಗೆ ಏರಿಕೆಯಾಗಲಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.