ನವದೆಹಲಿ: ಅರುಣಾಚಲಪ್ರದೇಶ ಭೇಟಿಯಲ್ಲಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು, ಹಿಂದೂಗಳ ಪವಿತ್ರ ಸ್ಥಳ ಪರಶುರಾಮ್ ಕುಂಡ್ಗೆ ರೈಲ್ವೆ ಸಂಪರ್ಕವನ್ನು ಒದಗಿಸುವುದಾಗಿ ಭರವಸೆ ನೀಡಿದ್ದಾರೆ.
ಅರುಣಾಚಲದ ನಾಮ್ಸಾಯಿಯಲ್ಲಿ ಸಮಾವೇಶವನ್ನು ಉದ್ದೇಶಿಸಿ ಮಾತನಾಡಿದ ಅವರು, “ಪರಶುರಾಮ್ ಕುಂಡ್ಗೆ ನಮ್ಮ ಸರ್ಕಾರ ರೈಲ್ವೆ ಸಂಪರ್ಕವನ್ನು ಒದಗಿಸಲಿದೆ. ಈಗಾಗಲೇ ನಾವು ಅರುಣಾಚಲ ರಾಜ್ಯಾದ್ಯಂತ ಉತ್ತಮ ರಸ್ತೆ ಸಂಪರ್ಕವನ್ನು ಕಲ್ಪಿಸಿದ್ದೇವೆ. ದೂರ ದೂರದ ಪ್ರದೇಶಗಳನ್ನು ಜೋಡಿಸುತ್ತಿದ್ದೇವೆ” ಎಂದಿದ್ದಾರೆ.
ನರೇಂದ್ರ ಮೋದಿ ಸರ್ಕಾರವು ಈಶಾನ್ಯ ರಾಜ್ಯಗಳಲ್ಲಿ ವಿವಾದಗಳನ್ನು ಬಗೆಹರಿಸಿ ಶಾಂತಿ ನೆಲೆಸುವಂತೆ ಮಾಡುತ್ತಿದೆ. ಕಳೆದ ಮೂರು ವರ್ಷಗಳಲ್ಲಿ 9600 ತೀವ್ರವಾದಿಗಳು ಶಸ್ತ್ರಾಸ್ತ್ರ ತ್ಯಜಿಸಿ ಮುಖ್ಯ ವಾಹಿನಿಗೆ ಮರಳಿದ್ದಾರೆ. ಈಶಾನ್ಯ ರಾಜ್ಯದಲ್ಲಿ ಸರ್ಕಾರದ ಪ್ರಯತ್ನದ ಭಾಗವಾಗಿ ಶೇ.89ರಷ್ಟು ಭಯೋತ್ಪಾದನ ಪ್ರಮಾಣ ಕಡಿಮೆಯಾಗಿದೆ” ಎಂದಿದ್ದಾರೆ.
2023ರ ಮೊದಲೇ ಅರುಣಾಚಲ ಪ್ರದೇಶ ಮತ್ತು ಅಸ್ಸಾಂ ನಡುವಿನ ಅಂತರ್ ರಾಜ್ಯ ಗಡಿ ವಿವಾದ ಬಗೆಹರಿಯುವ ನಿರೀಕ್ಷೆಯಿದೆ ಎಂದು ಅಮಿತ್ ಶಾ ಹೇಳಿದ್ದಾರೆ.
Arunachal Pradesh | We'll connect Parshuram Kund through railways. We have laid a network of roads across the state along with connecting far-flung places in the state: Union Home Minister Amit Shah in Namsai pic.twitter.com/XERidxNsHI
— ANI (@ANI) May 22, 2022
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.