ನವದೆಹಲಿ: ಟೋಕಿಯೊದಲ್ಲಿ ನಡೆಯುತ್ತಿರುವ ಕ್ವಾಡ್ ನಾಯಕರ ಶೃಂಗಸಭೆಯ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಆಸ್ಟ್ರೇಲಿಯಾದ ನೂತನ ಪ್ರಧಾನಿ ಆಂಥೋನಿ ಅಲ್ಬನೀಸ್ ಅವರೊಂದಿಗೆ ದ್ವಿಪಕ್ಷೀಯ ಸಭೆ ನಡೆಸಿದರು.
ಅಲ್ಬನೀಸ್ ಅವರ ಚುನಾವಣಾ ಗೆಲುವಿಗಾಗಿ ಪ್ರಧಾನಿ ಮೋದಿ ಅಭಿನಂದಿಸಿದರು. ಆಸ್ಟ್ರೇಲಿಯಾದ ನೂತನ ಪ್ರಧಾನಿ ಸೋಮವಾರವಷ್ಟೇ ಅಧಿಕಾರ ವಹಿಸಿಕೊಂಡರು.
ಟ್ವಿಟ್ ಮಾಡಿರುವ ಆಸ್ಟ್ರೇಲಿಯನ್ ಪ್ರಧಾನಿ, “ಶುದ್ಧ ಇಂಧನ ತಂತ್ರಜ್ಞಾನ ಸೇರಿದಂತೆ ಆಸ್ಟ್ರೇಲಿಯಾ ಮತ್ತು ಭಾರತದ ಸಂಪೂರ್ಣ ಕಾರ್ಯತಂತ್ರ ಮತ್ತು ಆರ್ಥಿಕ ಕಾರ್ಯಸೂಚಿಯಲ್ಲಿ ತೊಡಗಿಸಿಕೊಳ್ಳುವ ಚರ್ಚೆಗಾಗಿ ನರೇಂದ್ರ ಮೋದಿ ಅವರೊಂದಿಗಿನ ನನ್ನ ಭೇಟಿಯನ್ನು ಆತ್ಮೀಯವಾಗಿ ಸ್ವಾಗತಿಸುತ್ತೇನೆ” ಎಂದಿದ್ದಾರೆ.
ವ್ಯಾಪಾರ ಮತ್ತು ಹೂಡಿಕೆ, ರಕ್ಷಣಾ ಉತ್ಪಾದನೆ, ಹಸಿರು ಜಲಜನಕ, ಶಿಕ್ಷಣ, ವಿಜ್ಞಾನ ಮತ್ತು ತಂತ್ರಜ್ಞಾನ ಸೇರಿದಂತೆ ನವೀಕರಿಸಬಹುದಾದ ಇಂಧನ ಸೇರಿದಂತೆ ಸಮಗ್ರ ಕಾರ್ಯತಂತ್ರದ ಸಹಭಾಗಿತ್ವದಡಿಯಲ್ಲಿ ಬಹುಮುಖಿ ಸಹಕಾರವನ್ನು ಇಬ್ಬರೂ ನಾಯಕರು ಪರಿಶೀಲಿಸಿದ್ದಾರೆ ಎಂದು ವಿದೇಶಾಂಗ ಸಚಿವಾಲಯದ ಪ್ರಕಟಣೆ ತಿಳಿಸಿದೆ.
ಉಭಯ ಪ್ರಧಾನ ಮಂತ್ರಿಗಳು ದ್ವಿಪಕ್ಷೀಯ ಸಂಬಂಧದಲ್ಲಿ ಧನಾತ್ಮಕ ವೇಗ ಮುಂದುವರಿಸುವ ತಮ್ಮ ಬಯಕೆಯನ್ನು ದೃಢಪಡಿಸಿದರು ಎಂದು ಪ್ರಕಟಣೆ ತಿಳಿಸಿದೆ.
ಆಸ್ಟ್ರೇಲಿಯಾದ ಪ್ರಧಾನಿಗೆ ಭಾರತಕ್ಕೆ ಭೇಟಿ ನೀಡುವಂತೆ ಪ್ರಧಾನಮಂತ್ರಿಯವರು ಆಹ್ವಾನ ನೀಡಿದರು.
Warmly welcomed my meeting with @narendramodi for an engaging discussion on Australia and India’s full strategic and economic agenda, including on clean energy technology. Australia-India ties have never been closer. pic.twitter.com/XF6g2mu3xH
— Anthony Albanese (@AlboMP) May 24, 2022
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.