ಕರ್ನಾಟಕ ನವೀಕರಿಸಬಹುದಾದ ಇಂಧನ ಕ್ಷೇತ್ರದಲ್ಲಿ ಪ್ರಮುಖ ಮೈಲಿಗಲ್ಲು : ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ
ದಾವೋಸ್ : ದಾವೋಸ್ ನಲ್ಲಿ ನಡೆಯುತ್ತಿರುವ ವಿಶ್ವ ಆರ್ಥಿಕ ಶೃಂಗ ಸಭೆಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಸಮ್ಮುಖದಲ್ಲಿ ರೆನ್ಯೂ ಪವರ್ ಪ್ರೈ.ಲಿ. ಕಂಪೆನಿಯು ರಾಜ್ಯ ಸರ್ಕಾರದೊಂದಿಗೆ 50,000 ಕೋಟಿ ರೂ. ಹೂಡಿಕೆಯ ಒಪ್ಪಂದಕ್ಕೆ ಸಹಿ ಮಾಡಿತು. ಕರ್ನಾಟಕದ ನವೀಕರಿಸಬಹುದಾದ ಇಂಧನ ಕ್ಷೇತ್ರದಲ್ಲಿ ಈ ಒಪ್ಪಂದ ಪ್ರಮುಖ ಮೈಲಿಗಲ್ಲು ಆಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಎಂದು ತಿಳಿಸಿದರು.
ರೆನ್ಯೂ ಪವರ್ ಪ್ರೈ.ಲಿ. ಕಂಪೆನಿಯು ಮುಂದಿನ 7 ವರ್ಷಗಳಲ್ಲಿ ನವೀಕರಿಸಬಹುದಾದ ಇಂಧನ, ಬ್ಯಾಟರಿ ಸ್ಟೋರೇಜ್, ಗ್ರೀನ್ ಹೈಡ್ರೋಜನ್ ಘಟಕಗಳನ್ನು ಸ್ಥಾಪಿಸಲು ಉದ್ದೇಶಿಸಿದ್ದು, 2 ಹಂತಗಳಲ್ಲಿ ಯೋಜನೆಗಳನ್ನು ಕೈಗೊಳ್ಳಲಾಗುತ್ತದೆ.
ಮೊದಲ ಹಂತದಲ್ಲಿ ಈಗಾಗಲೇ ಜಾರಿಯಲ್ಲಿರುವ ಯೋಜನೆಗಳಿಗೆ 11,900 ಕೋಟಿ ರೂ.ಗಳ ಬಂಡವಾಳ ಹೂಡಿ, ಮುಂದಿನ 2 ವರ್ಷಗಳಲ್ಲಿ ಯೋಜನೆಗಳು ಕಾರ್ಯಾರಂಭ ಮಾಡಲಾಗುತ್ತದೆ.
ಎರಡನೇ ಹಂತದಲ್ಲಿ ನವೀಕರಿಸಬಹುದಾದ ಇಂಧನ ಹಾಗೂ ಗ್ರೀನ್ ಹೈಡ್ರೋಜನ್ ಘಟಕಗಳನ್ನು ಮುಂದಿನ 5 ವರ್ಷಗಳಲ್ಲಿ ಸ್ಥಾಪಿಸಲು 37,500 ಕೋಟಿ ರೂ.ಗಳ ಬಂಡವಾಳವನ್ನು ಹೂಡಿಕೆ ಮಾಡಲಾಗುತ್ತದೆ. ಈ ಎರಡು ಹಂತದ ಯೋಜನೆಗಳಿಂದ ಸುಮಾರು 30 ಸಾವಿರ ಉದ್ಯೋಗ ಸೃಷ್ಟಿಯ ನಿರೀಕ್ಷೆ ಇದೆ ಎಂದು ತಿಳಿಸಿದರು.
ದಾವೋಸ್ ನಲ್ಲಿ ನಡೆಯುತ್ತಿರುವ ವಿಶ್ವ ಆರ್ಥಿಕ ಶೃಂಗ ಸಭೆಯಲ್ಲಿ ಮುಖ್ಯಮಂತ್ರಿ @BSBommai ಅವರ ಸಮ್ಮುಖದಲ್ಲಿ ರೆನ್ಯೂ ಪವರ್ ಪ್ರೈ.ಲಿ. ಕಂಪೆನಿಯು ರಾಜ್ಯ ಸರ್ಕಾರದೊಂದಿಗೆ 50,000 ಕೋಟಿ ರೂ. ಹೂಡಿಕೆಯ ಒಪ್ಪಂದಕ್ಕೆ ಸಹಿ ಮಾಡಿತು.
1/2 pic.twitter.com/V0fnWmBr78— CM of Karnataka (@CMofKarnataka) May 24, 2022
ರೆನ್ಯೂ ಪವರ್ ಪ್ರೈ.ಲಿ. ಸಂಸ್ಥೆ :
ಭಾರತದಲ್ಲಿ ನವೀಕರಿಸಬಹುದಾದ ಇಂಧನದ ಉತ್ಪಾದನೆಯಲ್ಲಿ ತೊಡಗಿರುವ ಅತ್ಯಂತ ದೊಡ್ಡ ಸಂಸ್ಥೆ. ಭಾರತದ 9 ರಾಜ್ಯಗಳಲ್ಲಿ 120 ಕ್ಕೂ ಹೆಚ್ಚು ಪವನ, ಸೌರ ಹಾಗೂ ಹೈಡ್ರೋ ಇಂಧನ ಪ್ರಾಜೆಕ್ಟ್ ಗಳನ್ನು ಸ್ಥಾಪಿಸಿದೆ. ಕರ್ನಾಟಕದಲ್ಲಿ ಈ ಸಂಸ್ಥೆಯು ಹೆಚ್ಚು ಪ್ರಾಮುಖ್ಯತೆಯನ್ನು ಹೊಂದಿದೆ. ಸಂಸ್ಥೆಯು ಪ್ರಸ್ತುತ12 ಗೀಗಾವ್ಯಾಟ್ ನಷ್ಟು ಇಂಧನವನ್ನು ಉತ್ಪಾದಿಸುತ್ತಿದೆ.
ಮೆಗಾ ಡಾಟಾ ಸೆಂಟರ್:
ಇದಕ್ಕೂ ಮುನ್ನ ಮುಖ್ಯಮಂತ್ರಿಯವರನ್ನು ಭೇಟಿ ಮಾಡಿದ ಭಾರ್ತಿ ಎಂಟರ್ ಪ್ರೈಸಸ್ ನ ಅಧ್ಯಕ್ಷ ಹಾಗೂ ಸಿ ಇ ಓ ಸುನಿಲ್ ಭಾರ್ತಿ ಮಿತ್ತಲ್ ಅವರು ರಾಜ್ಯದಲ್ಲಿ ಇನ್ನೊಂದು ಮೆಗಾ ಡಾಟಾ ಸೆಂಟರ್ ಸ್ಥಾಪಿಸುವ ಇಂಗಿತ ವ್ಯಕ್ತಪಡಿಸಿದರು. ರಾಜ್ಯ ಸರ್ಕಾರವು ಎಲ್ಲ ಅಗತ್ಯ ಬೆಂಬಲ ನೀಡುವುದಾಗಿ ಮುಖ್ಯಮಂತ್ರಿಗಳು ತಿಳಿಸಿದರು.
"I am happy to share that #Bharti Enterprises plans to set up a mega #DataCentre in the state. The Govt. of #Karnataka has assured complete support for the project" : CM @BSBommai #WEF2022 #WorldEconomicForum #KarnatakaAtDavos #BuildForTheWorld @airtelnews pic.twitter.com/cSU7RSImBB
— CM of Karnataka (@CMofKarnataka) May 24, 2022
ಇದಲ್ಲದೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ಅದಾನಿ ಗ್ರೂಪ್ ಅಧ್ಯಕ್ಷ ಗೌತಮ್ ಅದಾನಿ ಅವರೊಂದಿಗೆ ಹಾಗೂ ಜಾನ್ಸನ್ ಕಂಟ್ರೋಲ್ಸ್ ನ ಸಿ ಇ ಓ ಜಾರ್ಜ್ ಒಲಿವರ್ ಅವರೊಂದಿಗೆ ಕರ್ನಾಟಕದಲ್ಲಿನ ಹೂಡಿಕೆಗಳ ಅವಕಾಶಗಳ ಬಗ್ಗೆ ಮಾತುಕತೆ ನಡೆಸಿದರು.
ದಾವೋಸ್ ನಲ್ಲಿ ನಡೆಯುತ್ತಿರುವ ವಿಶ್ವ ಆರ್ಥಿಕ ಶೃಂಗ ಸಭೆಯಲ್ಲಿ @AdaniOnline ಅಧ್ಯಕ್ಷ @gautam_adani ಅವರು ಮುಖ್ಯಮಂತ್ರಿ @BSBommai ಅವರನ್ನು ಭೇಟಿಯಾಗಿ ಚರ್ಚೆ ನಡೆಸಿದರು.
ಸಚಿವ @NiraniMurugesh, @drashwathcn, ಮುಖ್ಯಮಂತ್ರಿಯವರ ಪ್ರಧಾನ ಕಾರ್ಯದರ್ಶಿ ಎನ್. ಮಂಜುನಾಥ್ ಪ್ರಸಾದ್ ಹಾಗೂ ಇತರ ಅಧಿಕಾರಿಗಳು ಉಪಸ್ಥಿತರಿದ್ದರು. pic.twitter.com/DAuMkyxqlo
— CM of Karnataka (@CMofKarnataka) May 24, 2022
ಕೈಗಾರಿಕಾ ಸಚಿವ ಮುರುಗೇಶ್ ನಿರಾಣಿ, ಐಟಿ ಬಿಟಿ, ಉನ್ನತ ಶಿಕ್ಷಣ ಹಾಗೂ ಕೌಶಲ್ಯಾಭಿವೃದ್ಧಿ ಸಚಿವ ಡಾ. ಸಿ.ಎನ್. ಅಶ್ವತ್ಥನಾರಾಯಣ, ಕೈಗಾರಿಕಾ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಡಾ. ಇ.ವಿ. ರಮಣ ರೆಡ್ಡಿ, ಮುಖ್ಯಮಂತ್ರಿಯವರ ಪ್ರಧಾನ ಕಾರ್ಯದರ್ಶಿ ಎನ್. ಮಂಜುನಾಥ್ ಪ್ರಸಾದ್, ಕೈಗಾರಿಕಾ ಇಲಾಖೆ ಆಯುಕ್ತರಾದ ಗುಂಜನ್ ಕೃಷ್ಣ ಉಪಸ್ಥಿತರಿದ್ದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.