ನವದೆಹಲಿ: ದೇಶೀಯ ಮಾರುಕಟ್ಟೆಯಲ್ಲಿ ಹೆಚ್ಚುತ್ತಿರುವ ಖಾದ್ಯ ತೈಲಗಳ ಬೆಲೆಯನ್ನು ಕಡಿಮೆ ಮಾಡಿ ಗ್ರಾಹಕರಿಗೆ ನಿರಾಳತೆ ಒದಗಿಸುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಮಹತ್ವದ ನಿರ್ಧಾರಗಳನ್ನು ತೆಗೆದುಕೊಂಡಿದೆ. ವಾರ್ಷಿಕ 20 ಲಕ್ಷ ಮೆಟ್ರಿಕ್ ಟನ್ಗಳ ಕಚ್ಚಾ ಸೋಯಾಬೀನ್ ತೈಲ ಮತ್ತು ಕಚ್ಚಾ ಸೂರ್ಯಕಾಂತಿ ಎಣ್ಣೆಯ ಆಮದಿನ ಮೇಲಿನ ಕಸ್ಟಮ್ಸ್ ಸುಂಕ ಮತ್ತು ಕೃಷಿ ಮೂಲಸೌಕರ್ಯ ಅಭಿವೃದ್ಧಿ ಸೆಸ್ ಅನ್ನು ರದ್ದುಗೊಳಿಸಿದೆ.
ಹಣಕಾಸು ಸಚಿವಾಲಯದ ಅಧಿಕೃತ ಹೇಳಿಕೆಯ ಪ್ರಕಾರ, 20 ಲಕ್ಷ ಮೆಟ್ರಿಕ್ ಟನ್ಗಳಷ್ಟು ಕಚ್ಛಾ ಸೋಯಾಬೀನ್ ಎಣ್ಣೆ ಮತ್ತು 20 ಲಕ್ಷ ಮೆಟ್ರಿಕ್ ಟನ್ಗಳಷ್ಟು ಕಚ್ಚಾ ಸೂರ್ಯಕಾಂತಿ ಎಣ್ಣೆ ಆಮದಿಗೆ 2022-23 ಮತ್ತು 2023-24 ಎರಡು ಹಣಕಾಸು ವರ್ಷಗಳಿಗೆ ಸುಂಕ ಇರುವುದಿಲ್ಲ.
ಇದರರ್ಥ ಮಾರ್ಚ್ 31, 2024 ರವರೆಗೆ ಒಟ್ಟು 80 ಲಕ್ಷ ಮೆಟ್ರಿಕ್ ಟನ್ ಕಚ್ಚಾ ಸೋಯಾಬೀನ್ ತೈಲ ಮತ್ತು ಕಚ್ಚಾ ಸೂರ್ಯಕಾಂತಿ ಎಣ್ಣೆಯನ್ನು ಸುಂಕ ರಹಿತವಾಗಿ ಆಮದು ಮಾಡಿಕೊಳ್ಳಬಹುದು. ವಿನಾಯಿತಿಯು ದೇಶೀಯ ಬೆಲೆಗಳನ್ನು ತಗ್ಗಿಸಲು ಮತ್ತು ಹಣದುಬ್ಬರವನ್ನು ನಿಯಂತ್ರಿಸಲು ಸಹಾಯ ಮಾಡುತ್ತದೆ ಎಂದು ನಿರೀಕ್ಷಿಸಲಾಗಿದೆ.
ಕಸ್ಟಮ್ಸ್ ಸುಂಕ ಮತ್ತು ಕೃಷಿ ಮೂಲಸೌಕರ್ಯ ಮತ್ತು ಅಭಿವೃದ್ಧಿ ಸೆಸ್ನ ಶೂನ್ಯ ದರದಲ್ಲಿ 2 ವರ್ಷಗಳ ಅವಧಿಗೆ ಪ್ರತಿ ವರ್ಷಕ್ಕೆ 20 ಲಕ್ಷ ಮೆಟ್ರಿಕ್ಟನ್ ಕಚ್ಚಾ ಸೋಯಾಬೀನ್ ತೈಲ ಮತ್ತು ಕಚ್ಚಾ ಸೂರ್ಯಕಾಂತಿ ಎಣ್ಣೆಯನ್ನು ಆಮದು ಮಾಡಿಕೊಳ್ಳಲು ಕೇಂದ್ರ ಸರ್ಕಾರ ಅನುಮತಿ ನೀಡಿದೆ. ಇದರಿಂದ ಗ್ರಾಹಕರಿಗೆ ದೊಡ್ಡ ನಿರಾಳತೆ ಸಿಕ್ಕಿದೆ” ಎಂದು ಸಿಬಿಐಸಿ ಟ್ವೀಟ್ ಮಾಡಿದೆ.
Central Govt. has allowed import of a quantity of 20 Lakh MT each of Crude Soyabean Oil & Crude Sunflower Oil per year for a period of 2 years at Nil rate of customs duty & Agricultural Infrastructure and Development Cess.
This will provided significant relief to the consumers. pic.twitter.com/jvVq0UTfvv
— CBIC (@cbic_india) May 24, 2022
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.