ನವದೆಹಲಿ: ಕ್ವಾಡ್ ನಾಯಕರ ಶೃಂಗಸಭೆಯಲ್ಲಿ ಭಾಗವಹಿಸಿಸುವ ಸಲುವಾಗಿ ಎರಡು ದಿನಗಳ ಜಪಾನ್ ಪ್ರವಾಸದಲ್ಲಿದ್ದ ಪ್ರಧಾನಿ ನರೇಂದ್ರ ಮೋದಿ ಇಂದು ದೆಹಲಿಯ ಪಾಲಮ್ ವಾಯುಪಡೆ ನಿಲ್ದಾಣಕ್ಕೆ ಬಂದಿಳಿದಿದ್ದಾರೆ.
ಟೋಕಿಯೊದಲ್ಲಿ ಈ ಬಾರಿ ನಡೆದ ಕ್ವಾಡ್ ಶೃಂಗಸಭೆಯು ನಾಲ್ಕನೇ ಕ್ವಾಡ್ ಶೃಂಗಸಭೆಯಾಗಿತ್ತು. ಮಾರ್ಚ್ 2021 ರಲ್ಲಿ ಮೊದಲ ಬಾರಿಗೆ ವರ್ಚುವಲ್ ಆಗಿ ಸಭೆ ನಡೆಸಲಾಗಿತ್ತು, ನಂತರ ಸೆಪ್ಟೆಂಬರ್ 2021 ರಲ್ಲಿ ವಾಷಿಂಗ್ಟನ್ ಡಿ.ಸಿ ಯಲ್ಲಿ ಶೃಂಗಸಭೆ ನಡೆದಿತ್ತು ಮತ್ತು ಮಾರ್ಚ್ 2022 ರಲ್ಲಿ ವರ್ಚುವಲ್ ಸಭೆಯ ನಡೆದಿತ್ತು.
ಈ ಕ್ವಾಡ್ ಶೃಂಗಸಭೆಯಲ್ಲಿ, ಪ್ರಧಾನಿ ಮೋದಿ ಅವರು ಯುದ್ಧವನ್ನು ನಿಲ್ಲಿಸುವುದು, ಸಂವಾದ ಮತ್ತು ರಾಜತಾಂತ್ರಿಕತೆಯ ಪುನರಾರಂಭದ ಅಗತ್ಯತೆಯ ಕುರಿತು ಭಾರತದ ಸ್ಥಿರ ಮತ್ತು ತಾತ್ವಿಕ ನಿಲುವನ್ನು ಎತ್ತಿ ತೋರಿಸಿದರು.
ಶೃಂಗಸಭೆಯ ಸಮಯದಲ್ಲಿ, ನಾಯಕರು ಮುಕ್ತ ಮತ್ತು ಎಲ್ಲರನ್ನೂ ಒಳಗೊಂಡ ಇಂಡೋ-ಪೆಸಿಫಿಕ್ಗೆ ತಮ್ಮ ಹಂಚಿಕೆಯ ಬದ್ಧತೆಯನ್ನು ಪುನರುಚ್ಚರಿಸಿದರು ಮತ್ತು ಸಾರ್ವಭೌಮತ್ವ, ಪ್ರಾದೇಶಿಕ ಸಮಗ್ರತೆ ಮತ್ತು ವಿವಾದಗಳ ಶಾಂತಿಯುತ ಪರಿಹಾರದ ತತ್ವಗಳನ್ನು ಎತ್ತಿಹಿಡಿಯುವ ಪ್ರಾಮುಖ್ಯತೆಯನ್ನು ಪುನರುಚ್ಚರಿಸಿದರು.
ಇಂಡೋ-ಪೆಸಿಫಿಕ್ನಲ್ಲಿನ ಬೆಳವಣಿಗೆಗಳು ಮತ್ತು ಯುರೋಪಿನ ಸಂಘರ್ಷದ ದೃಷ್ಟಿಕೋನಗಳನ್ನು ವಿನಿಮಯ ಮಾಡಿಕೊಂಡರು. ಕ್ವಾಡ್ ಶೃಂಗಸಭೆಯ ಹೊರತಾಗಿ, ಪ್ರಧಾನಿ ಮಂಗಳವಾರ ಯುಎಸ್ ಅಧ್ಯಕ್ಷ ಜೋ ಬಿಡನ್ ಮತ್ತು ಆಸ್ಟ್ರೇಲಿಯಾದ ಹೊಸ ಪ್ರಧಾನಿ ಆಂಥೋನಿ ಅಲ್ಬನೀಸ್ ಅವರೊಂದಿಗೆ ದ್ವಿಪಕ್ಷೀಯ ಸಭೆಗಳನ್ನು ನಡೆಸಿದರು. ಅವರು ಜಪಾನ್ ಪ್ರಧಾನಿ ಫ್ಯೂಮಿಯೊ ಕಿಶಿಡಾ ಅವರೊಂದಿಗೆ ದ್ವಿಪಕ್ಷೀಯ ಸಭೆಯನ್ನೂ ನಡೆಸಲಿದ್ದಾರೆ.
ಜಪಾನ್ಗೆ ಭೇಟಿ ನೀಡಿದ ಮೊದಲ ದಿನವಾದ ಸೋಮವಾರ, ಪ್ರಧಾನಿ ಅವರು ಸರಣಿ ಕಾರ್ಯಕ್ರಮಗಳನ್ನು ಹೊಂದಿದ್ದರು. ಅವರು ಸಮೃದ್ಧಿಗಾಗಿ ಇಂಡೋ-ಪೆಸಿಫಿಕ್ ಆರ್ಥಿಕ ಚೌಕಟ್ಟನ್ನು ಪ್ರಾರಂಭಿಸುವ ಕಾರ್ಯಕ್ರಮದಲ್ಲಿ ಭಾಗವಹಿಸಿದರು ಮತ್ತು ಟೋಕಿಯೊದಲ್ಲಿ ವ್ಯಾಪಾರ ದುಂಡುಮೇಜಿನ ಅಧ್ಯಕ್ಷತೆ ವಹಿಸಿದ್ದರು. ಭಾರತೀಯ ಸಮುದಾಯದ ಸದಸ್ಯರೊಂದಿಗೆ ಸಂವಾದ ನಡೆಸಿದರು.
Delhi | Prime Minister Narendra Modi arrives from Tokyo after participating in #QuadSummit2022 as part of his two-day tour in Japan.
(Source: DD) pic.twitter.com/yvLPRB8Qrm
— ANI (@ANI) May 24, 2022
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.