ಕಾನ್ಪುರ: ಅಪ್ರಾಪ್ತ ಬಾಲಕನನ್ನು ಅಕ್ರಮವಾಗಿ ಬಂಧಿಸಿ, ಬಲವಂತವಾಗಿ ಮತಾಂತರಿಸಿ ಮಹಿಳೆಗೆ ಮದುವೆ ಮಾಡಿಸಿದ ಆರೋಪದ ಮೇಲೆ 24 ವರ್ಷದ ಮಹಿಳೆ, ಆಕೆಯ ಪೋಷಕರು ಮತ್ತು ಮುಸ್ಲಿಂ ಧರ್ಮಗುರುವನ್ನು ಪೊಲೀಸರು ಬಂಧಿಸಿರುವ ಘಟನೆ ಉತ್ತರಪ್ರದೇಶದಲ್ಲಿ ನಡೆದಿದೆ.
ಮದುವೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ನಂತರ ಬಂಧಿಸಲಾಗಿದೆ.
ಘಟನೆಯನ್ನು ಖಂಡಿಸಿ ಬಜರಂಗದಳದ ಸದಸ್ಯರು ಸೋಮವಾರ ಕಾಕಡಿಯೊ ಪೊಲೀಸ್ ಠಾಣೆಯ ಎದುರು ಪ್ರತಿಭಟನೆ ನಡೆಸಿದ್ದರು.
ತನಿಖೆಯಲ್ಲಿ ನಿರ್ಲಕ್ಷ್ಯ ತೋರಿದ್ದಕ್ಕಾಗಿ ಕಾಕಡಿಯೊ ಪೊಲೀಸ್ ಠಾಣೆಯ ಠಾಣಾಧಿಕಾರಿ (ಎಸ್ಎಚ್ಒ) ಸೇರಿದಂತೆ ಇಬ್ಬರು ಪೊಲೀಸರನ್ನು ಮಂಗಳವಾರ ಅಮಾನತುಗೊಳಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಘಟನೆ ಕುರಿತು ಪ್ರತಿಕ್ರಿಯಿಸಿದ ಪಶ್ಚಿಮ ವಿಭಾಗದ ಡಿಸಿಪಿ ಬಿಬಿಜಿಟಿಎಸ್ ಮೂರ್ತಿ, ‘ಮಹಮ್ಮದ್ ಹನೀಫ್ (42), ಅವರ ಪತ್ನಿ ಜಮೀಲಾ ಬಾನೊ (40) ಮತ್ತು ಅವರ ಪುತ್ರಿ ಸಿಮ್ರಾನ್ (24), ವಿವಾಹ ನೆರವೇರಿಸಿದ ಮುಸ್ಲಿಂ ಧರ್ಮಗುರು ತೌಹೀದ್ (52) ಅವರನ್ನು ಬಂಧಿಸಲಾಗಿದೆ ಎಂದಿದ್ದಾರೆ.
ಆರೋಪಿಗಳ ವಿರುದ್ಧ ಕಾನೂನುಬಾಹಿರ ಬಂಧನ ಮತ್ತು ಉತ್ತರ ಪ್ರದೇಶದ ಕಾನೂನುಬಾಹಿರ ಧಾರ್ಮಿಕ ಮತಾಂತರ ನಿಷೇಧ ಕಾನೂನಿನ ಸೆಕ್ಷನ್ಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.