ನವದೆಹಲಿ: ಜಮ್ಮು ಮತ್ತು ಕಾಶ್ಮೀರದ ಕುಪ್ವಾರ ಜಿಲ್ಲೆಯಲ್ಲಿ ಇಂದು ಬೆಳಿಗ್ಗೆ ನಡೆದ ಎನ್ಕೌಂಟರ್ನಲ್ಲಿ ಪಾಕಿಸ್ಥಾನ ಮೂಲದ ಉಗ್ರ ಸಂಘಟನೆ ಲಷ್ಕರ್-ಎ-ತೊಯ್ಬಾ (ಎಲ್ಇಟಿ) ದ ಮೂವರು ಭಯೋತ್ಪಾದಕರನ್ನು ಸಂಹಾರ ಮಾಡಲಾಗಿದೆ.
ಕುಪ್ವಾರದ ಜುಮಗುಂಡ್ ಗ್ರಾಮದಲ್ಲಿ ಭಯೋತ್ಪಾದಕರ ಒಳನುಸುಳುವಿಕೆ ಯತ್ನದ ಬಗ್ಗೆ ನಿರ್ದಿಷ್ಟ ಮಾಹಿತಿ ಪಡೆದ ನಂತರ ಕಾರ್ಯಾಚರಣೆಯನ್ನು ಪ್ರಾರಂಭಿಸಿದೆವು ಎಂದು ಕಾಶ್ಮೀರ ವಲಯ ಪೊಲೀಸರು ತಿಳಿಸಿದ್ದಾರೆ.
ಒಳನುಸುಳುತ್ತಿದ್ದ ಭಯೋತ್ಪಾದಕರನ್ನು ಸೇನೆ ಮತ್ತು ಪೊಲೀಸರು ತಡೆದಾಗ ಭದ್ರತಾ ಪಡೆಗಳು ಮತ್ತು ಭಯೋತ್ಪಾದಕರ ನಡುವೆ ಎನ್ಕೌಂಟರ್ ನಡೆಯಿತು ಎಂದು ಮೂಲಗಳು ತಿಳಿಸಿವೆ.
ಇಂದು ಕುಪ್ವಾರದಲ್ಲಿ ಸಂಹರಿಸಲ್ಪಟ್ಟ ಎಲ್ಲಾ ಮೂವರು ಭಯೋತ್ಪಾದಕರು ನಿಷೇಧಿತ ಭಯೋತ್ಪಾದಕ ಸಂಘಟನೆ ಎಲ್ಇಟಿಗೆ ಸೇರಿದ್ದಾರೆ ಎಂದು ಕಾಶ್ಮೀರ ಐಜಿಪಿ ವಿಜಯ್ ಕುಮಾರ್ ತಿಳಿಸಿದ್ದಾರೆ. ಗುರುತು ಪತ್ತೆ ಹಚ್ಚಲಾಗುತ್ತಿದೆ ಎಂದೂ ಅವರು ತಿಳಿಸಿದ್ದಾರೆ.
“ಮೂವರೂ ಭಯೋತ್ಪಾದಕರನ್ನು ತಟಸ್ಥಗೊಳಿಸಲಾಗಿದೆ, ನಿಷೇಧಿತ ಭಯೋತ್ಪಾದಕ ಸಂಘಟನೆ ಎಲ್ಇಟಿಯೊಂದಿಗೆ ಇವರು ಸಂಪರ್ಕ ಹೊಂದಿದ್ದರು. ಇವರ ಗುರುತನ್ನು ಖಚಿತಪಡಿಸಿಕೊಳ್ಳಲಾಗುತ್ತಿದೆ. ಶಸ್ತ್ರಾಸ್ತ್ರಗಳು ಮತ್ತು ಮದ್ದುಗುಂಡುಗಳು ಸೇರಿದಂತೆ ದೋಷಾರೋಪಣೆಯ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ” ಎಂದು ಐಜಿಪಿ ಕಾಶ್ಮೀರ ಹೇಳಿದ್ದಾರೆ.
#KupwaraEncounterUpdate: All three #terrorists killed, affiliated with proscribed #terror outfit LeT. Identification being ascertained. #Incriminating materials including arms & #ammunition recovered: IGP Kashmir@JmuKmrPolice https://t.co/WdnmmQzCUl
— Kashmir Zone Police (@KashmirPolice) May 26, 2022
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.