ಶ್ರೀನಗರ: ಕಾಶ್ಮೀರದ ಪ್ರತ್ಯೇಕತಾವಾದಿ ನಾಯಕ ಯಾಸಿನ್ ಮಲಿಕ್ಗೆ ಶಿಕ್ಷೆ ವಿಧಿಸಿರುವುದನ್ನು ವಿರೋಧಿಸಿ ಘೋಷಣೆಗಳನ್ನು ಕೂಗಿ ಕಲ್ಲುತೂರಾಟ ನಡೆಸಿದ ಹತ್ತು ಮಂದಿಯನ್ನು ಕಾಶ್ಮೀರದ ಶ್ರೀನಗರದಲ್ಲಿ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಬಂಧಿಸಲಾಗಿದೆ.
ಪೊಲೀಸರು ಮಧ್ಯರಾತ್ರಿ ದಾಳಿ ನಡೆಸಿ ಹಲವರನ್ನು ಬಂಧಿಸಿದ್ದಾರೆ. ಇನ್ನೂ ಹೆಚ್ಚಿನ ಆರೋಪಿಗಳನ್ನು ಗುರುತಿಸಲಾಗುತ್ತಿದ್ದು, ಶೀಘ್ರದಲ್ಲೇ ಬಂಧಿಸಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.
ಆರೋಪಿಗಳು ನಿನ್ನೆ ಶಿಕ್ಷೆ ಘೋಷಣೆಗೂ ಮುನ್ನ ಯಾಸಿನ್ ಮಲಿಕ್ ಮನೆಯ ಹೊರಗೆ ದೇಶವಿರೋಧಿ/ಕೋಮುವಾದಿ ಘೋಷಣೆ ಕೂಗಿದ್ದಾರೆ ಮತ್ತು ಗೂಂಡಾಗಿರಿಯ ವರ್ತನೆ ತೋರಿಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಈ ನಿಟ್ಟಿನಲ್ಲಿ, ಕಾನೂನುಬಾಹಿರ ಚಟುವಟಿಕೆಗಳ ತಡೆ ಕಾಯ್ದೆಯ ವಿವಿಧ ಸೆಕ್ಷನ್ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ಶ್ರೀನಗರದ ಪೊಲೀಸ್ ವರಿಷ್ಠಾಧಿಕಾರಿ ರಾಕೇಶ್ ಬಲ್ವಾಲ್ ಹೇಳಿದ್ದಾರೆ.
ಪ್ರತಿಭಟನೆಯ ಪ್ರಚೋದಕರ ವಿರುದ್ಧ ಸಾರ್ವಜನಿಕ ಸುರಕ್ಷತಾ ಕಾಯಿದೆಯಡಿಯಲ್ಲಿ ಕೂಡ ಪ್ರಕರಣ ದಾಖಲಿಸಲಾಗುವುದು ಮತ್ತು ಅವರನ್ನು ಜಮ್ಮು ಮತ್ತು ಕಾಶ್ಮೀರದ ಹೊರಗಿನ ಜೈಲುಗಳಲ್ಲಿ ಇರಿಸಲಾಗುವುದು ಎಂದಿದ್ದಾರೆ.
“ಶ್ರೀನಗರದಲ್ಲಿ ಕಾನೂನು ಮತ್ತು ಸುವ್ಯವಸ್ಥೆಯನ್ನು ಹಾಳು ಮಾಡುವ ಯಾವುದೇ ಪ್ರಯತ್ನವನ್ನು ಸಹಿಸಲಾಗುವುದಿಲ್ಲ ಎಂದು ಬಲವಾಗಿ ಪುನರುಚ್ಚರಿಸಲಾಗಿದೆ. ಇದಲ್ಲದೆ, ಪಟ್ಟಭದ್ರ ಹಿತಾಸಕ್ತಿಗಳ ಎಲ್ಲಾ ದುಷ್ಟ ಪ್ರಯತ್ನಗಳನ್ನು ಕಾನೂನಿನ ಸಂಪೂರ್ಣ ಬೆಂಬಲದೊಂದಿಗೆ ತಡೆಗಟ್ಟಲಾಗುವುದು” ಎಂದು ಪೊಲೀಸರು ಹೇಳಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.