ಲಂಡನ್: ಲೇಖಕಿ ಗೀತಾಂಜಲಿ ಶ್ರೀ ಅವರ ‘ಟೂಮ್ ಆಫ್ ಸ್ಯಾಂಡ್’ ಕಾದಂಬರಿಗೆ ಪ್ರತಿಷ್ಠಿತ ಅಂತಾರಾಷ್ಟ್ರೀಯ ಬೂಕರ್ ಪ್ರಶಸ್ತಿ ದೊರೆತಿದೆ. ಹಿಂದಿ ಪುಸ್ತಕವೊಂದು ಬೂಕರ್ ಪ್ರಶಸ್ತಿಗೆ ಭಾಜನವಾಗಿರುವುದು ಇದೇ ಮೊದಲು.
ನಿನ್ನೆ ಲಂಡನ್ ನಲ್ಲಿ ನಡೆದ ಸಮಾರಂಭದಲ್ಲಿ ಗೀತಾಂಜಲಿ ಶ್ರೀ ಅವರು ಪ್ರಶಸ್ತಿಯನ್ನು ಸ್ವೀಕರಿಸಿದ್ದಾರೆ.
‘ಟೂಮ್ ಆಫ್ ಸ್ಯಾಂಡ್’ ಕಾದಂಬರಿಯನ್ನು ಡೈಸಿ ರಾಕ್ವೆಲ್ ಅವರು ಇಂಗ್ಲೀಷ್ ಗೆ ಭಾಷಾಂತರ ಮಾಡಿದ್ದಾರೆ. ಹೀಗಾಗಿ ಪ್ರಶಸ್ತಿ ಮೊತ್ತ 50 ಸಾವಿರ ಪೌಂಡ್ ಅನ್ನು ಗೀತಾಂಜಲಿ ಶ್ರೀ ಮತ್ತು ಡೈಸಿ ಅವರು ಹಂಚಿಕೊಳ್ಳಲಿದ್ದಾರೆ.
ಉತ್ತರಪ್ರದೇಶ ಮೂಲದವರಾದ ಗೀತಾಂಜಲಿ ಅವರು ಮೂರು ಕಾದಂಬರಿ ಮತ್ತು ಹಲವು ಕಥೆಗಳನ್ನು ಬರೆದಿದ್ದಾರೆ ಅವರ ಹಲೋ ಪುಸ್ತಕಗಳು ಇಂಗ್ಲೀಷ್, ಫ್ರಾನ್ಸ್, ಜರ್ಮನಿ ಮತ್ತು ಕೊರಿಯಾ ಭಾಷೆಗಳಿಗೆ ಭಾಷಾಂತರಗೊಂಡಿದೆ.
We are delighted to announce that the winner of the #2022InternationalBooker Prize is ‘Tomb of Sand’ by Geetanjali Shree, translated from Hindi to English by @shreedaisy and published by @tiltedaxispress@Terribleman @JeremyTiang @mervatim @VascoDaGappah @VivGroskop pic.twitter.com/TqUTew0Aem
— The Booker Prizes (@TheBookerPrizes) May 26, 2022
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.