ನವದೆಹಲಿ: ಇ-ಕಾಮರ್ಸ್ ವೆಬ್ಸೈಟ್ಗಳಲ್ಲಿನ ನಕಲಿ ವಿಮರ್ಶೆಗಳನ್ನು ಪರಿಶೀಲಿಸಲು ಕೇಂದ್ರವು ಚೌಕಟ್ಟನ್ನು ಅಭಿವೃದ್ಧಿಪಡಿಸಲಿದೆ ಎಂದು ಅಧಿಕೃತ ಪ್ರಕಟಣೆ ಇಂದು ತಿಳಿಸಿದೆ.
ಭಾರತದಲ್ಲಿ ಇ-ಕಾಮರ್ಸ್ ಘಟಕಗಳು ಅನುಸರಿಸುತ್ತಿರುವ ಪ್ರಸ್ತುತ ಕಾರ್ಯವಿಧಾನ ಮತ್ತು ಜಾಗತಿಕವಾಗಿ ಲಭ್ಯವಿರುವ ಉತ್ತಮ ಅಭ್ಯಾಸಗಳನ್ನು ಅಧ್ಯಯನ ಮಾಡಿದ ನಂತರ ಗ್ರಾಹಕ ವ್ಯವಹಾರಗಳ ಇಲಾಖೆ (DoCA) ಈ ಚೌಕಟ್ಟುಗಳನ್ನು ಅಭಿವೃದ್ಧಿಪಡಿಸಲಿದೆ.
ಶುಕ್ರವಾರ ಇ-ಕಾಮರ್ಸ್ ಘಟಕಗಳು, ಗ್ರಾಹಕ ವೇದಿಕೆಗಳು, ಕಾನೂನು ವಿಶ್ವವಿದ್ಯಾಲಯಗಳು, ವಕೀಲರು, FICCI, CII, ಗ್ರಾಹಕ ಹಕ್ಕುಗಳ ಕಾರ್ಯಕರ್ತರು ಮತ್ತು Advertising Standards Council of India (ASCI) ಸಹಯೋಗದೊಂದಿಗೆ ಗ್ರಾಹಕ ವ್ಯವಹಾರಗಳ ಇಲಾಖೆ ನಡೆಸಿದ ಸಭೆಯಲ್ಲಿ ವೆಬ್ಸೈಟ್ಗಳಲ್ಲಿನ ನಕಲಿ ವಿಮರ್ಶೆಗಳ ಪ್ರಮಾಣ ಮತ್ತು ಅದಕ್ಕೆ ಬೇಕಾದ ಮಾರ್ಗಸೂಚಿಯ ಬಗ್ಗೆ ಚರ್ಚೆ ನಡೆಸಲಾಗಿದೆ ಎಂದು ಗ್ರಾಹಕ ವ್ಯವಹಾರಗಳ ಸಚಿವಾಲಯವು ಪ್ರಕಟಣೆಯಲ್ಲಿ ತಿಳಿಸಿದೆ.
ಖರೀದಿದಾರರು ಇ-ಕಾಮರ್ಸ್ ಪ್ಲಾಟ್ಫಾರ್ಮ್ಗಳಲ್ಲಿ ಪೋಸ್ಟ್ ಮಾಡಲಾದ ವಿಮರ್ಶೆಗಳನ್ನು ಹೆಚ್ಚಾಗಿ ಅವಲಂಬಿಸಿದ್ದಾರೆ. ಹೀಗಾಗಿ ನಕಲಿ ವಿಮರ್ಶೆಗಳ ಮೇಲೆ ಕಣ್ಣಿಡುವುದು ಅವಶ್ಯಕವಾಗಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.