ಬೆಂಗಳೂರು : ವಿರೋಧಪಕ್ಷ ನಾಯಕರಾದ ಸಿದ್ಧರಾಮಯ್ಯ ಅವರು ದ್ರಾವಿಡರೇ ಅಥವಾ ಆರ್ಯರೇ ಎಂಬುದಕ್ಕೆ ಮೊದಲು ಉತ್ತರ ನೀಡಲಿ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತಿಳಿಸಿದರು. ಅವರು ಇಂದು ಆರ್.ಟಿ.ನಗರ ನಿವಾಸದ ಎದುರು ಮಾಧ್ಯಮದವರೊಂದಿಗೆ ಮಾತನಾಡಿದರು.
ಆರ್ ಎಸ್ ಎಸ್ ನವರು ಹೊರಗಿನಿಂದ ಬಂದವರು, ನೆಹರೂ ಅವರಿಗೆ ಹೋಲಿಕೆ ಮಾಡಬಾರದು ಎಂಬ ವಿರೋಧಪಕ್ಷ ನಾಯಕರಾದ ಸಿದ್ಧರಾಮಯ್ಯ ಅವರ ಹೇಳಿಕೆಗೆ ಮಾಧ್ಯಮದವರಿಗೆ ಪ್ರತಿಕ್ರಿಯೆ ನೀಡಿ, ನೆಹರೂ ಅವರಿಗೆ ಹೋಲಿಕೆ ಮಾಡಲು ಸಾಧ್ಯವಿಲ್ಲ, ಏಕೆಂದರೆ ಚೀನಾ ದೇಶ ಭಾರತ ಗಡಿಯನ್ನು ಆಕ್ರಮಿಸಿದಾಗ ಯಾವುದೇ ಕ್ರಮವನ್ನು ತೆಗೆದುಕೊಳ್ಳದೇ ನೆಹರೂ ಅವರು ಗಡಿಭಾಗವನ್ನು ಬಿಟ್ಟುಕೊಟ್ಟರು. ಆದರೆ ಪ್ರಧಾನಿ ನರೇಂದ್ರ ಮೋದಿಯವರು ಚೀನಾ ದೇಶ ಗಡಿಪ್ರದೇಶ ಆಕ್ರಮಿಸಿಕೊಳ್ಳಲು ಬಂದಾಗ ಗಟ್ಟಿಯಾಗಿ ನಿಂತು ಆ ಪ್ರದೇಶವನ್ನು ಉಳಿಸಿಕೊಂಡವರು. ಪಾಕಿಸ್ತಾನದ ಜೊತೆಗೆ ರಾಜಿ ಮಾಡಿಕೊಳ್ಳಲಿಲ್ಲ. ಭಾರತದ ಅಖಂಡತೆ ಹಾಗೂ ಏಕತೆಗೆ ಸಾಧನೆಯನ್ನು ಮಾಡಿದ್ದಾರೆ. ಮೋದಿಯವರು ಭಾರತವನ್ನು ಶಕ್ತಿಶಾಲಿಯಾಗಿ ಮಾಡಿದ್ದಾರೆ.ಹೀಗಾಗಿ ನೆಹರೂ ಅವರೊಂದಿಗೆ ಹೋಲಿಕೆ ಸಾಧ್ಯವೇ ಇಲ್ಲ ಎಂದು ತಿಳಿಸಿದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.