ನವದೆಹಲಿ: ಕೋವಿಡ್-19 ನಿಂದಾಗಿ ಪೋಷಕರನ್ನು ಕಳೆದುಕೊಂಡ ಮಕ್ಕಳಿಗೆ ಅವರ ಶಾಲಾ ಶಿಕ್ಷಣ ಮತ್ತು ಉನ್ನತ ಶಿಕ್ಷಣಕ್ಕೆ ಸಂಪೂರ್ಣ ಬೆಂಬಲ ಸಿಗಲಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.
ಇಂದು ಬೆಳಿಗ್ಗೆ ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ಮಕ್ಕಳಿಗಾಗಿನ PM-CARES ಯೋಜನೆಯಡಿ ಪ್ರಯೋಜನಗಳನ್ನು ಬಿಡುಗಡೆ ಮಾಡಿದ ಮೋದಿ, PM-CARES ಪೋಷಕರನ್ನು ಕಳೆದುಕೊಂಡ ಮಕ್ಕಳು ಎದುರಿಸುತ್ತಿರುವ ಕೆಲವು ಹೊರೆಗಳನ್ನು ನಿವಾರಿಸುವ ಉಪಕ್ರಮವಾಗಿದೆ. ದು 18 ರಿಂದ 23 ವರ್ಷದೊಳಗಿನ ಮಕ್ಕಳಿಗೆ ನಿಗದಿತ ಸ್ಟೈಫಂಡ್ ಮತ್ತು 23 ವರ್ಷಕ್ಕೆ ಹತ್ತು ಲಕ್ಷ ರೂ ಧನ ಸಹಾಯ ಒದಗಿಸುತ್ತದೆ.
PM-CARES ಮೂಲಕ, ದೈನಂದಿನ ಅಗತ್ಯಗಳಿಗಾಗಿ ಪ್ರತಿ ತಿಂಗಳು ನಾಲ್ಕು ಸಾವಿರ ರೂಪಾಯಿಗಳನ್ನು ನೀಡುವ ಮೂಲಕ ಸರ್ಕಾರವು ಮಕ್ಕಳಿಗೆ ಬೆಂಬಲ ನೀಡುತ್ತಿದೆ ಎಂದು ಪ್ರಧಾನಿ ಹೇಳಿದರು. ಈ ಯೋಜನೆಯ ಮೂಲಕ ಮಕ್ಕಳಿಗೆ ಆಯುಷ್ಮಾನ್ ಹೆಲ್ತ್ ಕಾರ್ಡ್ ನೀಡಲಾಗುತ್ತಿದ್ದು, ಇದು ಐದು ಲಕ್ಷ ರೂಪಾಯಿಗಳವರೆಗೆ ಅವರ ಆರೋಗ್ಯ ವೆಚ್ಚವನ್ನು ಭರಿಸುತ್ತದೆ ಎಂದದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.