ಬೆಂಗಳೂರು: ಕರ್ನಾಟಕದಿಂದ ರಾಜ್ಯಸಭೆಗೆ ಆಯ್ಕೆಯಾಗಿರುವ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರನ್ನು ಇಂದು ಮಲ್ಲೇಶ್ವರದ ರಾಜ್ಯ ಬಿಜೆಪಿ ಕಾರ್ಯಾಲಯ “ಜಗನ್ನಾಥ ಭವನ”ದಲ್ಲಿ ಅಭಿನಂದಿಸಲಾಯಿತು.
ವಿಧಾನಪರಿಷತ್ ಸದಸ್ಯರಾದ ತೇಜಸ್ವಿನಿಗೌಡ ಅವರು ಹಾರಾರ್ಪಣೆ ಮಾಡಿದರು. ಶಾಲು ಹೊದಿಸಿ ಅವರನ್ನು ಗೌರವಿಸಲಾಯಿತು.
ರಾಷ್ಟ್ರೀಯ ಸಹ ಸಂಘಟನಾ ಪ್ರಧಾನ ಕಾರ್ಯದರ್ಶಿ ಸತೀಶ್, ಪಕ್ಷದ ರಾಜ್ಯ ಉಪಾಧ್ಯಕ್ಷ ನಿರ್ಮಲ್ ಕುಮಾರ್ ಸುರಾಣಾ, ರಾಜ್ಯ ಪ್ರಧಾನ ಕಾರ್ಯದರ್ಶಿ ಅಶ್ವತ್ಥನಾರಾಯಣ, ರಾಜ್ಯ ಮುಖ್ಯ ವಕ್ತಾರ ಎಂಜಿ ಮಹೇಶ್, ಶಾಸಕ ರಾಜ್ಕುಮಾರ್ ಪಾಟೀಲ ತೇಲ್ಕೂರ ಅವರು ಈ ಸಂದರ್ಭದಲ್ಲಿ ಹಾಜರಿದ್ದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.