ನವದೆಹಲಿ: ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು 2024 ರ ಲೋಕಸಭೆ ಚುನಾವಣೆಗೆ ಸಿದ್ಧತೆಗಳನ್ನು ಪ್ರಾರಂಭಿಸಿದ್ದಾರೆ. ರಾಜ್ಯದ 80 ರಲ್ಲಿ 75 ಸ್ಥಾನಗಳನ್ನು ಗೆಲ್ಲುವ ಗುರಿಯೊಂದಿಗೆ ಮುನ್ನಡೆಯುವಂತೆ ಅವರು ಬಿಜೆಪಿ ಕಾರ್ಯಕರ್ತರಿಗೆ ಭಾನುವಾರ ಕರೆ ನೀಡಿದ್ದಾರೆ.
2019 ರಲ್ಲಿ, ಉತ್ತರ ಪ್ರದೇಶದಲ್ಲಿ ಬಿಜೆಪಿ 62 ಲೋಕಸಭಾ ಸ್ಥಾನಗಳನ್ನು ಗೆದ್ದುಕೊಂಡಿದ್ದರೆ ಅದರ ಮಿತ್ರ ಪಕ್ಷವಾದ ಅಪ್ನಾ ದಳ (ಎಸ್) ಎರಡು ಸ್ಥಾನಗಳಲ್ಲಿ ಗೆಲುವು ದಾಖಲಿಸಿದೆ.
“ನಾವು 2024 ರ ಲೋಕಸಭೆ ಚುನಾವಣೆಗೆ ಈಗಿನಿಂದಲೇ ನ ಸಿದ್ಧತೇ ಮಾಡಬೇಕು. 75 ಸ್ಥಾನಗಳನ್ನು ಗೆಲ್ಲುವ ಗುರಿಯೊಂದಿಗೆ ನಾವು ಮುನ್ನಡೆಯಬೇಕು ಎಂದು ಲಕ್ನೋದಲ್ಲಿ ನಡೆದ ಬಿಜೆಪಿಯ ಒಂದು ದಿನದ ರಾಜ್ಯ ಕಾರ್ಯಕಾರಿಣಿ ಸಭೆಯಲ್ಲಿ ಆದಿತ್ಯನಾಥ್ ಹೇಳಿದರು.
ಉತ್ತರ ಪ್ರದೇಶದ ವಿಧಾನಸಭಾ ಚುನಾವಣೆಯ ನಂತರ ಬಿಜೆಪಿಯ ಮೊದಲ ರಾಜ್ಯ ಕಾರ್ಯಕಾರಿಣಿ ಸಭೆ ಇದಾಗಿದೆ.
“ಜನರ ಸಹಾಯದಿಂದ ಮತ್ತು ಕೋವಿಡ್ ಸಮಯದಲ್ಲಿ ನಮ್ಮ ಕಠಿಣ ಪರಿಶ್ರಮದಿಂದ, ನಾವು ವಿಧಾನಸಭಾ ಚುನಾವಣೆಯಲ್ಲಿ ಉತ್ತಮ ಫಲಿತಾಂಶಗಳನ್ನು ಪಡೆದಿದ್ದೇವೆ. 2024ರ ಸಾರ್ವತ್ರಿಕ ಚುನಾವಣೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ಉತ್ತರ ಪ್ರದೇಶದಲ್ಲಿ 75 ಸ್ಥಾನಗಳನ್ನು ಗೆಲ್ಲುವ ಗುರಿಯೊಂದಿಗೆ ಮುನ್ನಡೆಯಬೇಕಿದೆ ಎಂದರು.
ಪ್ರಧಾನಿಯಾಗಿ ಎಂಟು ವರ್ಷಗಳನ್ನು ಪೂರೈಸಿದ್ದಕ್ಕಾಗಿ ಮೋದಿಯನ್ನು ಅಭಿನಂದಿಸಿದ ಆದಿತ್ಯನಾಥ್, 2024 ರ ಮಾರ್ಗಸೂಚಿಯೊಂದಿಗೆ ಬಿಜೆಪಿ ತನ್ನ ಗುರಿಯನ್ನು ಸಾಧಿಸುವಲ್ಲಿ ಯಶಸ್ವಿಯಾಗುತ್ತದೆ ಎಂದು ಹೇಳಿದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.