ನವದೆಹಲಿ: ನ್ಯಾಷನಲ್ ಹೆರಾಲ್ಡ್ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿಗೆ ಸಮನ್ಸ್ ಜಾರಿ ಮಾಡಿದೆ. ಜೂನ್ 8 ರಂದು ವಿಚಾರಣೆಗೆ ಹಾಜರಾಗುವಂತೆ ಆಗಮಿಸುವಂತೆ ಸೂಚನೆ ನೀಡಿದೆ.
ಕಾಂಗ್ರೆಸ್ ನಾಯಕ ಅಭಿಷೇಕ್ ಮನು ಸಿಂಘ್ವಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಸೋನಿಯಾ ಗಾಂಧಿ ಸಮನ್ಸ್ ಪಾಲಿಸಲಿದ್ದಾರೆ. ರಾಹುಲ್ ಗಾಂಧಿ ಅವರು ಆ ದಿನಾಂಕದಂದ ಇಲ್ಲಿದ್ದರೆ ಹೋಗುತ್ತಾರೆ ಅಥವಾ ಅದಕ್ಕಾಗಿ ಹೊಸ ದಿನಾಂಕವನ್ನು ಹುಡುಕಬಹುದು” ಎಂದು ಸಿಂಘ್ವಿ ಹೇಳಿದ್ದಾರೆ.
ನ್ಯಾಷನಲ್ ಹೆರಾಲ್ಡ್ ಪತ್ರಿಕೆಯ ಮಾಲೀಕತ್ವ ಹೊಂದಿರುವ ಯಂಗ್ ಇಂಡಿಯನ್ನಲ್ಲಿ ಪಕ್ಷದ ಪ್ರಚಾರದಲ್ಲಿ ಹಣಕಾಸು ಅವ್ಯವಹಾರ ನಡೆದ ಪ್ರಕರಣವನ್ನು ದಾಖಲಿಸಲಾಗಿದೆ.
ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆಯ (ಪಿಎಂಎಲ್ಎ) ಕ್ರಿಮಿನಲ್ ಸೆಕ್ಷನ್ಗಳ ಅಡಿಯಲ್ಲಿ ಸೋನಿಯಾ ಮತ್ತು ರಾಹುಲ್ ಗಾಂಧಿ ಅವರ ಹೇಳಿಕೆಗಳನ್ನು ದಾಖಲಿಸಲು ಸಂಸ್ಥೆ ಬಯಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ನ್ಯಾಷನಲ್ ಹೆರಾಲ್ಡ್ ಅನ್ನು ಅಸೋಸಿಯೇಟೆಡ್ ಜರ್ನಲ್ಸ್ ಲಿಮಿಟೆಡ್ (AJL) ಪ್ರಕಟಿಸತ್ತದೆ ಮತ್ತು ಇದು ಯಂಗ್ ಇಂಡಿಯನ್ ಪ್ರೈವೇಟ್ ಲಿಮಿಟೆಡ್ ಒಡೆತನದಲ್ಲಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.