ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಇತ್ತೀಚೆಗೆ ಮುಕ್ತಾಯಗೊಂಡ ವಿಶ್ವ ಬಾಕ್ಸಿಂಗ್ ಚಾಂಪಿಯನ್ಶಿಪ್ನಲ್ಲಿ ಪದಕ ಜಯಿಸಿದ ಮಹಿಳಾ ಬಾಕ್ಸರ್ಗಳಾದ ನಿಖತ್ ಜರೀನ್, ಮನೀಶಾ ಮೌನ್ ಮತ್ತು ಪರ್ವೀನ್ ಹೂಡಾ ಅವರನ್ನು ನಿನ್ನೆ ಭೇಟಿಯಾದರು.
ನಿಖತ್ ಝರೀನ್ ಚಾಂಪಿಯನ್ಶಿಪ್ನಲ್ಲಿ ಚಿನ್ನದ ಪದಕವನ್ನು ಗೆದ್ದಿದ್ದು, ಈ ಸಾಧನೆ ಮಾಡಿದ ಐದನೇ ಭಾರತೀಯ ಮಹಿಳೆ ಎನಿಸಿಕೊಂಡಿದ್ದಾರೆ. ಮನೀಶಾ ಮೌನ್ ಮತ್ತು ಪರ್ವೀನ್ ಹೂಡಾ ಕಂಚಿನ ಪದಕ ಗೆದ್ದಿದ್ದಾರೆ.
ಮಹಿಳಾ ವಿಶ್ವ ಬಾಕ್ಸಿಂಗ್ ಚಾಂಪಿಯನ್ಶಿಪ್ನಲ್ಲಿ ಭಾರತಕ್ಕೆ ಹೆಮ್ಮೆ ತಂದ ಬಾಕ್ಸರ್ಗಳನ್ನು ಭೇಟಿಯಾಗಲು ನನಗೆ ಸಂತೋಷವಾಗಿದೆ ಎಂದು ಭೇಟಿ ನಂತರ ಮೋದಿ ಟ್ವೀಟ್ನಲ್ಲಿ ತಿಳಿಸಿದ್ದಾರೆ.
ಕ್ರೀಡೆ ಮತ್ತು ಅದರಾಚೆಗಿನ ಜೀವನ ಸೇರಿದಂತೆ ತಮ್ಮ ಜೀವನ ಪಯಣಗಳ ಕುರಿತು ಕ್ರೀಡಾಳುಗಳು ಅತ್ಯುತ್ತಮ ಸಂಭಾಷಣೆ ನಡೆಸಿದರು ಎಂದು ಮೋದಿ ಹೇಳಿದ್ದಾರೆ. ಅವರ ಮುಂದಿನ ಪ್ರಯತ್ನಗಳಿಗೆ ಮೋದಿ ಶುಭ ಹಾರೈಸಿದ್ದಾರೆ.
Prime Minister Narendra Modi meets the women boxers Nikhat Zareen, Manisha Moun and Parveen Hooda who won medals in the World Boxing Championships pic.twitter.com/4CHqr6FM1d
— ANI (@ANI) June 1, 2022
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.