ಡೆಹ್ರಾಡೂನ್: ಚಂಪಾವತ್ ವಿಧಾನಸಭಾ ಕ್ಷೇತ್ರಕ್ಕೆ ಇಂದು ನಡೆದ ಉಪಚುನಾವಣೆಯಲ್ಲಿ ಉತ್ತರಾಖಂಡ ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ 55,000ಕ್ಕೂ ಹೆಚ್ಚು ಮತಗಳಿಂದ ಜಯಗಳಿಸಿದ್ದಾರೆ. ದಾಖಲೆಯ ಗೆಲುವಿ ಕಂಡ ಧಾಮಿ ಅವರನ್ನು ಪ್ರಧಾನಿ ಮೋದಿ ಅಭಿನಂದಿಸಿದ್ದಾರೆ.
ಪುಷ್ಕರ್ ಧಾಮಿ ಅವರು ಕಾಂಗ್ರೆಸ್ನ ನಿರ್ಮಲಾ ಗಹ್ಟೋರಿ ಅವರನ್ನು 55,025 ಮತಗಳಿಂದ ಸೋಲಿಸಿದ್ದಾರೆ ಎಂದು ಚಂಪಾವತ್ನಲ್ಲಿ ಚುನಾವಣಾ ಅಧಿಕಾರಿಗಳು ತಿಳಿಸಿದ್ದಾರೆ.
ಪುಷ್ಕರ್ ಧಾಮಿ ಅವರು ರಾಜ್ಯ ವಿಧಾನಸಭೆಯ ಸದಸ್ಯರಾಗಲು ಚಂಪಾವತ್ ಕ್ಷೇತ್ರದಿಂದ ಉಪಚುನಾವಣೆಯಲ್ಲಿ ಸ್ಪರ್ಧಿಸಬೇಕಾಗಿತ್ತು, ಇದು ಅವರು ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಆರು ತಿಂಗಳೊಳಗೆ ಪೂರೈಸಬೇಕಾದ ಸಾಂವಿಧಾನಿಕ ಅನಿವಾರ್ಯತೆಯಾಗಿತ್ತು.
ಈ ವರ್ಷದ ಫೆಬ್ರವರಿಯಲ್ಲಿ ನಡೆದ ಉತ್ತರಾಖಂಡ ಚುನಾವಣೆಯಲ್ಲಿ ಖತಿಮಾಕ್ಷೇತ್ರದಿಂದ ಅವರು ಸೋತಿದ್ದರು. ಆದರೂ ಮುಖ್ಯಮಂತ್ರಿಯಾಗಿ ನೇಮಕಗೊಂಡರು.
“ಚಂಪಾವತ್ನಿಂದ ದಾಖಲೆಯ ಗೆಲುವು ಪಡೆದ ಉತ್ತರಾಖಂಡದ ಕ್ರಿಯಾಶೀಲ ಸಿಎಂ ಪುಷ್ಕರ್ ಸಿಂಗ್ ಧಾಮ ಅವರಿಗೆ ಅಭಿನಂದನೆಗಳು. ಅವರು ಉತ್ತರಾಖಂಡದ ಪ್ರಗತಿಗೆ ಇನ್ನಷ್ಟು ಶ್ರಮಿಸುತ್ತಾರೆ ಎಂಬ ವಿಶ್ವಾಸ ನನಗಿದೆ. ಬಿಜೆಪಿಯಲ್ಲಿ ನಂಬಿಕೆ ಇಟ್ಟಿರುವ ಚಂಪಾವತ್ ಜನರಿಗೆ ನಾನು ಧನ್ಯವಾದ ಹೇಳುತ್ತೇನೆ ಮತ್ತು ಅವರ ಶ್ರಮಕ್ಕಾಗಿ ನಮ್ಮ ಕಾರ್ಯಕರ್ತರನ್ನು ಶ್ಲಾಘಿಸುತ್ತೇನೆ” ಎಂದು ಉಪಚುನಾವಣೆ ಫಲಿತಾಂಶ ಪ್ರಕಟವಾದ ನಂತರ ಪ್ರಧಾನಿ ನರೇಂದ್ರ ಮೋದಿ ಟ್ವೀಟ್ ಮಾಡಿದ್ದಾರೆ.
Congratulations to Uttarakhand’s dynamic CM @pushkardhami for the record win from Champawat. I am confident he will work even harder for the progress of Uttarakhand. I thank the people of Champawat for placing their faith in BJP and laud our Karyakartas for their hardwork.
— Narendra Modi (@narendramodi) June 3, 2022
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.