ನವದೆಹಲಿ: ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜೂನ್ 13 ರಂದು ವಿಚಾರಣೆಗೆ ಹಾಜರಾಗುವಂತೆ ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಅವರಿಗೆ ಜಾರಿ ನಿರ್ದೇಶನಾಲಯ (ಇಡಿ) ಹೊಸ ಸಮನ್ಸ್ ಜಾರಿ ಮಾಡಿದೆ ಎಂದು ಅಧಿಕಾರಿಗಳು ಶುಕ್ರವಾರ ತಿಳಿಸಿದ್ದಾರೆ.
ಅವರನ್ನು ಮೊದಲು ಜೂನ್ 2 ರಂದು ವಿಚಾರಣೆಗೆ ಬರುವಂತೆ ಸೂಚನೆ ನೀಡಲಾಗಿತ್ತು. ಆದರೆ ದೇಶದಿಂದ ಹೊರಗಿರುವ ಕಾರಣ ಹೊಸ ದಿನಾಂಕವನ್ನು ಅವರು ಕೋರಿದ್ದರು.
ಇದೀಗ ರಾಹುಲ್ ಗಾಂಧಿ ಅವರಿಗೆ ಜೂನ್ 13 ರಂದು ಕೇಂದ್ರ ದೆಹಲಿಯಲ್ಲಿರುವ ಫೆಡರಲ್ ಏಜೆನ್ಸಿಯ ಪ್ರಧಾನ ಕಚೇರಿಯಲ್ಲಿ ಹಾಜರಾಗುವಂತೆ ತಿಳಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಅವರ ತಾಯಿ ಮತ್ತು ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರನ್ನು ಜೂನ್ 8 ರಂದು ಏಜೆನ್ಸಿಯ ಮುಂದೆ ಬರುವಂತೆ ಕೇಳಲಾಗಿದೆ. ಆದರೀಗ ಅವರು ಕೋವಿಡ್ನಿಂದ ಬಳಲುತ್ತಿರುವ ಕಾರಣ ಹಾಜರಾಗುವುದು ಸಾಧ್ಯವಿಲ್ಲ.
ನ್ಯಾಷನಲ್ ಹೆರಾಲ್ಡ್ ಪತ್ರಿಕೆಯ ಮಾಲೀಕತ್ವವನ್ನು ಹೊಂದಿರುವ ಯಂಗ್ ಇಂಡಿಯನ್ನಲ್ಲಿ ಪಕ್ಷದ ಪ್ರಚಾರದಲ್ಲಿ ನಡೆದ ಹಣಕಾಸು ಅಕ್ರಮಗಳ ಕುರಿತು ಇ.ಡಿ ತನಿಖೆ ನಡೆಸುತ್ತಿದೆ
ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆಯ (ಪಿಎಂಎಲ್ಎ) ಕ್ರಿಮಿನಲ್ ಸೆಕ್ಷನ್ಗಳ ಅಡಿಯಲ್ಲಿ ರಾಹುಲ್ ಗಾಂಧಿ ಮತ್ತು ಸೋನಿಯಾ ಗಾಂಧಿ ಅವರ ಹೇಳಿಕೆಗಳನ್ನು ದಾಖಲಿಸಲು ಸಂಸ್ಥೆ ಬಯಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ನ್ಯಾಷನಲ್ ಹೆರಾಲ್ಡ್ ಅನ್ನು ಅಸೋಸಿಯೇಟೆಡ್ ಜರ್ನಲ್ಸ್ ಲಿಮಿಟೆಡ್ (AJL) ಪ್ರಕಟಿಸಿದೆ ಮತ್ತು ಯಂಗ್ ಇಂಡಿಯನ್ ಪ್ರೈವೇಟ್ ಲಿಮಿಟೆಡ್ ಒಡೆತನದಲ್ಲಿದೆ.
ತನಿಖೆಯ ಭಾಗವಾಗಿ ಇತ್ತೀಚೆಗೆ ಸಂಸ್ಥೆಯು ಹಿರಿಯ ಕಾಂಗ್ರೆಸ್ ನಾಯಕರಾದ ಮಲ್ಲಿಕಾರ್ಜುನ ಖರ್ಗೆ ಮತ್ತು ಪವನ್ ಬನ್ಸಾಲ್ ಅವರನ್ನು ಪ್ರಶ್ನಿಸಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.