ನವದೆಹಲಿ: ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಶುಕ್ರವಾರ ಜಮ್ಮು ಮತ್ತು ಕಾಶ್ಮೀರದ ಭದ್ರತೆ ಕುರಿತು ಲೆಫ್ಟಿನೆಂಟ್ ಗವರ್ನರ್ ಮನೋಜ್ ಸಿನ್ಹಾ ಮತ್ತು ಇತರ ಉನ್ನತ ಅಧಿಕಾರಿಗಳೊಂದಿಗೆ ಸಭೆ ನಡೆಸಲಿದ್ದಾರೆ. ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್ ಮತ್ತು ಜಮ್ಮು ಮತ್ತು ಕಾಶ್ಮೀರ ಪೊಲೀಸ್ ಮಹಾನಿರ್ದೇಶಕ ದಿಲ್ಬಾಗ್ ಸಿಂಗ್ ಕೂಡ ಸಭೆಯಲ್ಲಿ ಭಾಗವಹಿಸಲಿದ್ದಾರೆ ಎಂದು ತಿಳಿದುಬಂದಿದೆ.
ಕೇಂದ್ರ ಗೃಹ ಕಾರ್ಯದರ್ಶಿ ಅಜಯ್ ಭಲ್ಲಾ, ಕೇಂದ್ರ ಮೀಸಲು ಪೊಲೀಸ್ ಪಡೆಯ ಮಹಾನಿರ್ದೇಶಕ ಕುಲ್ದೀಪ್ ಸಿಂಗ್ ಮತ್ತು ಗಡಿ ಭದ್ರತಾ ಪಡೆ ಮುಖ್ಯಸ್ಥ ಪಂಕಜ್ ಸಿಂಗ್ ಕೂಡ ಪಾಲ್ಗೊಳ್ಳುವ ನಿರೀಕ್ಷೆಯಿದೆ. ಜಮ್ಮು ಮತ್ತು ಕಾಶ್ಮೀರದಲ್ಲಿ ಇತ್ತೀಚೆಗೆ ನಡೆದ ಕಾಶ್ಮೀರಿ ಪಂಡಿತರ ಹತ್ಯೆಗಳ ಹಿನ್ನೆಲೆಯಲ್ಲಿ ಈ ಸಭೆ ನಡೆಯುತ್ತಿದೆ.
ಇತ್ತೀಚೆಗೆ ನಡೆದ ಭಯೋತ್ಪಾದಕ ದಾಳಿಯಲ್ಲಿ, ಗುರುವಾರ ಜಮ್ಮು ಮತ್ತು ಕಾಶ್ಮೀರದ ಕುಲ್ಗಾಮ್ ಜಿಲ್ಲೆಯಲ್ಲಿ ಬ್ಯಾಂಕ್ ಮ್ಯಾನೇಜರ್ ವಿಜಯ್ ಕುಮಾರ್ ಅವರನ್ನು ಅವರ ಕಚೇರಿಯ ಹೊರಗೆ ಭಯೋತ್ಪಾದಕರು ಗುಂಡಿಕ್ಕಿ ಕೊಂದಿದ್ದಾರೆ. ಅಲ್ಲದೇ ಇಬ್ಬರು ಕಾರ್ಮಿಕರ ಮೇಲೆ ದಾಳಿ ನಡೆಸಿ ಒಬ್ಬರನ್ನು ಹತ್ಯೆ ಮಾಡಿದ್ದಾರೆ. ಅದಕ್ಕೂ ಮೊದಲು ಜಮ್ಮುವಿನ ಸಾಂಬಾ ಜಿಲ್ಲೆಯವರಾದ 36 ವರ್ಷದ ಹಿಂದೂ ಮಹಿಳಾ ಶಿಕ್ಷಕಿ ರಜನಿ ಬಾಲಾ ಅವರನ್ನು ಕುಲ್ಗಾಮ್ನ ಗೋಪಾಲ್ಪೋರಾದ ಸರ್ಕಾರಿ ಶಾಲೆಯಲ್ಲಿ ಭಯೋತ್ಪಾದಕರು ಗುಂಡಿಕ್ಕಿ ಕೊಂದಿದ್ದರು. ಕಳೆದ ತಿಂಗಳು ಕಾಶ್ಮೀರಿ ಪಂಡಿತ್ ಉದ್ಯೋಗಿ ರಾಹುಲ್ ಭಟ್ ಸೇರಿದಂತೆ ಇಬ್ಬರು ನಾಗರಿಕರು ಮತ್ತು ಮೂವರು ಕರ್ತವ್ಯ ನಿರತ ಪೊಲೀಸರನ್ನು ಕಾಶ್ಮೀರದಲ್ಲಿ ಭಯೋತ್ಪಾದಕರು ಹತ್ಯೆ ಮಾಡಿದ್ದರು.
ಈ ಘಟನೆಗೆ ಸಂಬಂಧಿಸಿದಂತೆ ಇಂದಿನ ಸಭೆಯಲ್ಲಿ ಮಹ್ವದ ಚರ್ಚೆ ನಡೆಯಲಿದೆ.
ಎರಡು ವಾರಗಳ ಹಿಂದೆ, ಶಾ ಅವರು ಅಮರನಾಥ ಯಾತ್ರೆಯ ಭದ್ರತಾ ವ್ಯವಸ್ಥೆಗಳು ಮತ್ತು ಜಮ್ಮು ಮತ್ತು ಕಾಶ್ಮೀರದ ಒಟ್ಟಾರೆ ಭದ್ರತಾ ಪರಿಸ್ಥಿತಿಯನ್ನು ಪರಿಶೀಲಿಸಲು ಸಭೆ ನಡೆಸಿದ್ದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.