ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಅನಂತನಾಗ್ ಜಿಲ್ಲೆಯಲ್ಲಿ ಶನಿವಾರ ನಸುಕಿನ ವೇಳೆ ನಡೆದ ಎನ್ಕೌಂಟರ್ನಲ್ಲಿ ನಿಷೇಧಿತ ಭಯೋತ್ಪಾದಕ ಸಂಘಟನೆ ಹಿಜ್ಬ್-ಉಲ್-ಮುಜಾಹಿದ್ದೀನ್ನ ಕಮಾಂಡರ್ ನಿಸಾರ್ ಖಾಂಡೆ ಹತನಾಗಿದ್ದು, ಮೂವರು ಸೈನಿಕರು ಮತ್ತು ಒಬ್ಬ ನಾಗರಿಕ ಗಾಯಗೊಂಡಿದ್ದಾರೆ.
ಭಯೋತ್ಪಾದಕನಿಂದ ಒಂದು ಎಕೆ 47 ರೈಫಲ್ ಸೇರಿದಂತೆ ಅಕ್ರಮ ಸಾಮಗ್ರಿಗಳು, ಶಸ್ತ್ರಾಸ್ತ್ರಗಳು ಮತ್ತು ಮದ್ದುಗುಂಡುಗಳನ್ನು ವಶಪಡಿಸಿಕೊಳ್ಳಲಾಗಿದೆ.
“ನಿಷೇಧಿತ ಭಯೋತ್ಪಾದಕ ಸಂಘಟನೆಯ ಭಯೋತ್ಪಾದಕ ಕಮಾಂಡರ್ ಹೆಚ್.ಎಂ.ನಿಸಾರ್ ಖಾಂಡೆ ಹತ್ಯೆಯಾಗಿದೆ. 01 ಎಕೆ 47 ರೈಫಲ್ ಸೇರಿದಂತೆ ಆಯುಧಗಳು ಮತ್ತು ಮದ್ದುಗುಂಡುಗಳನ್ನು ವಶಪಡಿಸಿಕೊಳ್ಳಲಾಗಿದೆ. ಕಾರ್ಯಾಚರಣೆ ಪ್ರಗತಿಯಲ್ಲಿದೆ” ಎಂದು ಕಾಶ್ಮೀರದ ಪೊಲೀಸ್ ಮಹಾನಿರೀಕ್ಷಕ ವಿಜಯ್ ಕುಮಾರ್ ಟ್ವೀಟ್ ಮಾಡಿದ್ದಾರೆ.
ದಕ್ಷಿಣ ಕಾಶ್ಮೀರದ ಅನಂತ್ನಾಗ್ ಜಿಲ್ಲೆಯ ರಿಶಿಪೊರಾ ಗ್ರಾಮ ಕಪ್ರಾನ್ ಪ್ರದೇಶದಲ್ಲಿ ಭಯೋತ್ಪಾದಕರು ಮತ್ತು ಭದ್ರತಾ ಪಡೆಗಳ ನಡುವೆ ಗುಂಡಿನ ಚಕಮಕಿ ನಡೆದಿದೆ.
ಗ್ರಾಮದಲ್ಲಿ ಭಯೋತ್ಪಾದಕರ ಉಪಸ್ಥಿತಿಯ ಬಗ್ಗೆ ಮಾಹಿತಿ ಪಡೆದ ನಂತರ ಪೊಲೀಸ್, ಸೇನೆ ಮತ್ತು ಸಿಆರ್ಪಿಎಫ್ನ ಜಂಟಿ ತಂಡವು ಶೋಧ ಕಾರ್ಯಾಚರಣೆಯನ್ನು ಪ್ರಾರಂಭಿಸಿತು ಎಂದು ಕಾರ್ಯಾಚರಣೆಯನ್ನು ಮೇಲ್ವಿಚಾರಣೆ ಮಾಡುತ್ತಿರುವ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಐಜಿಪಿ ಕಾಶ್ಮೀರ ವಿಜಯ್ ಕುಮಾರ್ ಅವರು ಗುಂಡಿನ ಚಕಮಕಿಯನ್ನು ದೃಢಪಡಿಸಿದ್ದಾರೆ, “ಅನಂತನಾಗ್ನ ರಿಷಿಪೋರಾ ಪ್ರದೇಶದಲ್ಲಿ ಎನ್ಕೌಂಟರ್ ಪ್ರಾರಂಭವಾಗಿದೆ. ಪೊಲೀಸರು ಮತ್ತು ಭದ್ರತಾ ಪಡೆಗಳು ಕಾರ್ಯಪ್ರವೃತ್ತವಾಗಿವೆ. ಹೆಚ್ಚಿನ ವಿವರಗಳನ್ನು ಹಂಚಿಕೊಳ್ಳಲಾಗುವುದು” ಎಂದಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.