ಬೆಂಗಳೂರು: ರೋಹಿತ್ ಚಕ್ರತೀರ್ಥ ನೇತೃತ್ವದ ಪಠ್ಯಪುಸ್ತಕ ಪರಿಷ್ಕರಣಾ ಸಮಿತಿಯ ಕಾರ್ಯ ಮುಗಿದಿರುವುದರಿಂದ ಆ ಸಮಿತಿಯನ್ನು ವಿಸರ್ಜಿಸಲಾಗಿದೆ. ಪ್ರಸ್ತುತ ಪರಿಷ್ಕರಿಸಿರುವ ಪಠ್ಯಪುಸ್ತಕದಲ್ಲಿ ಯಾವಾದಾದರೂ ಆಕ್ಷೇಪಾರ್ಹ ವಿಷಯಗಳು ಇದ್ದರೆ ಅವುಗಳನ್ನು ಮತ್ತೊಮ್ಮೆ ಪರಿಷ್ಕರಣೆ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಹೇಳಿದ್ದಾರೆ.
ಈ ಮೂಲಕ ಪಠ್ಯ ಪುಸ್ತಕ ಪರಿಷ್ಕರಣೆಗೆ ಸಂಬಂಧಿಸಿದಂತೆ ಹಲವು ದಿನಗಳಿಂದ ಎದ್ದಿದ್ದ ವಿವಾದಕ್ಕೆ ತೆರೆ ಎಳೆಯುವ ಪ್ರಯತ್ನ ಮಾಡಿದ್ದಾರೆ.
ಅಲ್ಲದೇ ಬಸವಣ್ಣನವರ ವಿಷಯಕ್ಕೆ ಸಂಬಂಧಿಸಿದಂತೆ ಸೂಕ್ತವಾಗಿ ಪರಿಷ್ಕರಿಸಲು ನಿರ್ಧಾರ ಮಾಡಲಾಗಿದೆ ಎಂದು ಬೊಮ್ಮಾಯಿ ತಿಳಿಸಿದ್ದಾರೆ.
ಪರಿಷ್ಕೃತ ಪಠ್ಯ ಪುಸ್ತಕ ಗೊಂದಲದ ಬಗ್ಗೆ ಸಿಎಂ ಜೊತೆ ಶಿಕ್ಷಣ ಸಚಿವ ನಾಗೇಶ್ ಹಾಗು ಶಿಕ್ಷಣ ಇಲಾಖೆ ಕಾರ್ಯದರ್ಶಿ ಸೆಲ್ವ ಕುಮಾರ್ ಚರ್ಚೆ ನಡೆಸಿದ್ದರು. ಸಾಹಿತಿಗಳಿಂದ ಸರ್ಕಾರದ ಪ್ರತಿಷ್ಠಾನಗಳಿಗೆ ರಾಜೀನಾಮೆ, ಲೇಖನ ವಾಪಸ್ಗೆ ಪತ್ರ ಬರೆದಿರುವುದು, ಕುವೆಂಪು, ನಾಡಗೀತೆಗೆ ಅಪಮಾನ ಆರೋಪ ಕುರಿತ ವಿವಾದ ಸೇರಿದಂತೆ ಪರಿಷ್ಕೃತ ಪಠ್ಯದ ಎದ್ದಿರುವ ಗೊಂದಲದ ಬಗ್ಗೆ ಸಿಎಂಗೆ ವರದಿ ನೀಡಲಾಗಿದೆ. ಈ ವರದಿ ಬಗ್ಗೆ ಸಿಎಂ ಸುದೀರ್ಘ ಸಭೆ ನಡೆಸಿ ಪಠ್ಯಪುಸ್ತಕ ಪರಿಷ್ಕರಣೆ ಕುರಿತು ಎದ್ದಿರುವ ವಿವಾದದ ಬಗ್ಗೆ ಸರ್ಕಾರದ ನಿರ್ಧಾರವನ್ನು ಪ್ರಕಟಿಸಿದ್ದಾರೆ.
ಶಾಲಾ ಶಿಕ್ಷಣದಲ್ಲಿ ಪಠ್ಯಕ್ರಮ ಮತ್ತು ಪಠ್ಯ ಪುಸ್ತಕಗಳನ್ನು ಕಾಲ ಕಾಲಕ್ಕೆ ತಕ್ಕಂತೆ ಪರಿಷ್ಕರಿಸಲಾಗುತ್ತದೆ. ರಾಜ್ಯದಲ್ಲಿ ಹಲವು ಬಾರಿ ಪಠ್ಯ ಪುಸ್ತಕಗಳನ್ನು ಪರಿಷ್ಕರಣೆ ಮಾಡಲಾಗಿದೆ. ಈ ಹಿಂದೆ ಜಾರಿಯಲ್ಲಿದ್ದ ಕೆಲವು ಪಠ್ಯಪುಸ್ತಕಗಳಲ್ಲಿ ಹಲವು ಆಕ್ಷೇಪಾರ್ಹ ಅಂಶಗಳು ಇದ್ದ ಕಾರಣ ಸಮಾಜ ವಿಜ್ಞಾನ ಹಾಗೂ ಕನ್ನಡ ಭಾಷಾ ವಿಷಯಗಳಿಗೆ ಸಂಬಂಧಿಸಿದಂತೆ ಪಠ್ಯ ಪುಸ್ತಕಗಳ ಅಲ್ಪ ಪರಿಷ್ಕರಣೆಯನ್ನು ಮಾಡಲಾಗಿದೆ ಎಂದು ಸಿಎಂ ಬೊಮ್ಮಾಯಿ ಪತ್ರಿಕಾ ಹೇಳಿಕೆ ಮೂಲಕ ತಿಳಿಸಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.