ನವದೆಹಲಿ: “ಆಪರೇಷನ್ ಮಹಿಳಾ ಸುರಕ್ಷಾ” ಅಡಿಯಲ್ಲಿ ನಡೆಸಲಾಗುತ್ತಿರುವ ರಾಷ್ಟ್ರವ್ಯಾಪಿ ಅಭಿಯಾನದಲ್ಲಿ ರೈಲ್ವೇ ಪ್ರೊಟೆಕ್ಷನ್ ಫೋರ್ಸ್ (ಆರ್ಪಿಎಫ್) ಮಾನವ ಕಳ್ಳಸಾಗಣೆಗೆ ಬಲಿಯಾಗುತ್ತಿದ್ದ 150 ಹೆಣ್ಣು ಮಕ್ಕಳನ್ನು ರಕ್ಷಣೆ ಮಾಡಿದೆ.
ಭಾರತೀಯ ರೈಲ್ವೇಯಲ್ಲಿ ಮಹಿಳೆಯರ ಸುರಕ್ಷಿತ ಪ್ರಯಾಣವನ್ನು ಖಚಿತಪಡಿಸಿಕೊಳ್ಳಲು ಆರ್ಪಿಎಫ್ ಮತ್ತು ಮುಂಚೂಣಿಯ ರೈಲ್ವೆ ಸಿಬ್ಬಂದಿ ಪಟ್ಟುಬಿಡದೆ ಕೆಲಸ ಮಾಡುತ್ತಿದ್ದಾರೆ. ಮಹಿಳಾ ಸುರಕ್ಷತೆಯ ಉದ್ದೇಶಕ್ಕಾಗಿ ಸಮರ್ಪಿತವಾದ ಪ್ಯಾನ್ ಇಂಡಿಯಾ ಡ್ರೈವ್ “ಆಪರೇಷನ್ ಮಹಿಳಾ ಸುರಕ್ಷಾ” ಅನ್ನು 3 ರಿಂದ 31 ಮೇ 2022 ರಿಂದ ಪ್ರಾರಂಭಿಸಲಾಗಿದೆ.
ಈ ಸಮಯದಲ್ಲಿ, ಮಹಿಳೆಯರಿಗೆ ಮೀಸಲಿಟ್ಟ ಬೋಗಿಗಳಲ್ಲಿ ಅನಧಿಕೃತವಾಗಿ ಪ್ರಯಾಣಿಸುತ್ತಿದ್ದ 7000 ಕ್ಕೂ ಹೆಚ್ಚು ಜನರನ್ನು ಆರ್ಪಿಎಫ್ ಬಂಧಿಸಿದೆ. ಆರ್ಪಿಎಫ್ 150 ಮಹಿಳೆಯರನ್ನು ಮಾನವ ಕಳ್ಳಸಾಗಣೆಗೆ ಬಲಿಯಾಗದಂತೆ ರಕ್ಷಿಸಿದೆ.
ರೈಲಿನಲ್ಲಿ ಪ್ರಯಾಣಿಸುವ ಮಹಿಳಾ ಪ್ರಯಾಣಿಕರಿಗೆ ಹೆಚ್ಚಿನ ಸುರಕ್ಷತೆ ಮತ್ತು ಭದ್ರತೆಯನ್ನು ಒದಗಿಸುವ ಉದ್ದೇಶದಿಂದ ಪ್ಯಾನ್ ಇಂಡಿಯಾ ಉಪಕ್ರಮ “ಮೇರಿ ಸಹೇಲಿ” ಸಹ ಕಾರ್ಯನಿರ್ವಹಿಸುತ್ತಿದೆ. ತರಬೇತಿ ಪಡೆದ ಮಹಿಳಾ ಅಧಿಕಾರಿಗಳು ಮತ್ತು ಸಿಬ್ಬಂದಿಗಳ 283 ತಂಡಗಳನ್ನು ನಿಯೋಜಿಸಲಾಗಿದೆ.
ರೈಲು ಬಳಕೆದಾರರಿಗೆ ಅವರ ಸುರಕ್ಷತೆ ಮತ್ತು ಅವರ ಪ್ರಯಾಣದ ಸಮಯದಲ್ಲಿ ಮಾಡಬೇಕಾದ ಮತ್ತು ಮಾಡಬಾರದ ವಿಷಯಗಳ ಬಗ್ಗೆ ತಿಳಿಸಲು 5742 ಜಾಗೃತಿ ಅಭಿಯಾನಗಳನ್ನು ಆಯೋಜಿಸಲಾಗಿದೆ. ಈ ತಿಂಗಳ ಅವಧಿಯ ಕಾರ್ಯಾಚರಣೆಯಲ್ಲಿ ಆರ್ಪಿಎಫ್ ಸಿಬ್ಬಂದಿ ತಮ್ಮ ಪ್ರಾಣವನ್ನೇ ಪಣಕ್ಕಿಟ್ಟು, ಚಲಿಸುತ್ತಿರುವ ರೈಲಿಗೆ ಹತ್ತುವಾಗ/ಇಳಿಯುವಾಗ ಜಾರಿಬಿದ್ದ 10 ಮಹಿಳೆಯರ ಪ್ರಾಣವನ್ನು ಉಳಿಸಿದ್ದಾರೆ ಎಂದು ರೈಲ್ವೇ ಮೂಲ ತಿಳಿಸಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.