ನವದೆಹಲಿ: ಪ್ರಕೃತಿಯ ಮಹತ್ವವನ್ನು ಗುರುತಿಸುವ ಮತ್ತು ಅದರ ರಕ್ಷಣೆಗಾಗಿ ಜಾಗೃತಿ ಮೂಡಿಸುವ ಉದ್ದೇಶದಿಂದ ಪ್ರತಿ ವರ್ಷ ಜೂನ್ 5 ರಂದು ವಿಶ್ವ ಪರಿಸರ ದಿನವನ್ನು ಆಚರಿಸಲಾಗುತ್ತದೆ.
ವಿಶ್ವ ಪರಿಸರ ದಿನಾಚರಣೆ ಕಾರ್ಯಕ್ರಮವು ವಿಶ್ವಸಂಸ್ಥೆಯ ಪ್ರಮುಖ ಕಾರ್ಯಕ್ರಮವಾಗಿದ್ದು, ಪರಿಸರಕ್ಕೆ ಬೆದರಿಕೆಯೊಡ್ಡುವ ಸಮಸ್ಯೆಗಳ ಬಗ್ಗೆ ಜಾಗೃತಿ ಮೂಡಿಸುತ್ತದೆ. ಪ್ರತಿ ವರ್ಷ, ದಿನದ ಮಹತ್ವವನ್ನು ಗುರುತಿಸಲು ನಿರ್ದಿಷ್ಟ ವಿಷಯದ ಬಗ್ಗೆ ಕಾರ್ಯಕ್ರಮವನ್ನು ಆಯೋಜಿಸಲಾಗುತ್ತದೆ.
ವಿಶ್ವ ಪರಿಸರ 2022 ಅನ್ನು ʼಕೇವಲ ಒಂದೇ ಭೂಮಿʼ ಎಂಬ ಥೀಮ್ನೊಂದಿಗೆ ಆಚರಿಸಲಾಗುತ್ತಿದೆ.
ವಿಶ್ವ ಪರಿಸರ ದಿನವನ್ನು 1972ರಲ್ಲಿ ವಿಶ್ವಸಂಸ್ಥೆಯ ಮಾನವ ಪರಿಸರ ಸಮ್ಮೇಳನದಲ್ಲಿ ಆರಂಭಿಸಲಾಯಿತು.
ವಿಶ್ವ ಪರಿಸರ ದಿನವು ಸಮುದ್ರ ಮಾಲಿನ್ಯ, ಅಧಿಕ ಜನಸಂಖ್ಯೆ, ಜಾಗತಿಕ ತಾಪಮಾನ, ಸುಸ್ಥಿರ ಬಳಕೆ ಮತ್ತು ವನ್ಯಜೀವಿ ಅಪರಾಧಗಳಂತಹ ಪರಿಸರ ಸಮಸ್ಯೆಗಳ ಕುರಿತು ಜಾಗೃತಿ ಮೂಡಿಸಲು ಒಂದು ವೇದಿಕೆಯಾಗಿದೆ.
It’s #WorldEnvironmentDay!
Let’s all celebrate the beauty of our natural world and all of the amazing benefits it brings us.
There is #OnlyOneEarth pic.twitter.com/quiLlUmrok
— UN Environment Programme (@UNEP) June 5, 2022
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.