ಬೆಂಗಳೂರು: ಕೋವಿಡ್ ಸಂಪೂರ್ಣ ನಿಯಂತ್ರಣದಲ್ಲಿದೆ. ಅನಗತ್ಯವಾಗಿ ಯಾರೂ ಗಾಬರಿಯಾಗುವ ಅವಶ್ಯಕತೆ ಇಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.
ಅವರು ಇಂದು ತಮ್ಮ ನಿವಾಸದ ಬಳಿ ಮಾಧ್ಯಮದವರೊಂದಿಗೆ ಮಾತನಾಡುತ್ತಿದ್ದರು.
ಕೋವಿಡ್ ಪ್ರಕರಣಗಳ ಸಂಖ್ಯೆಯಲ್ಲಿ ಹೆಚ್ಚಳವಾಗಿರುವ ಹಿನ್ನೆಲೆಯಲ್ಲಿ ಕೋವಿಡ್ ನಿರ್ವಹಣೆ ಬಗ್ಗೆ ಆರೋಗ್ಯ ಇಲಾಖೆ ಪ್ರಧಾನ ಕಾರ್ಯದರ್ಶಿಗಳು ಸಭೆ ನಡೆಸಿ ಎಲ್ಲಾ ಜಿಲ್ಲೆಗಳಲ್ಲಿನ ಪರಿಸ್ಥಿತಿಯ ಬಗ್ಗೆ ವರದಿ ಸಲ್ಲಿಸಲಿದ್ದಾರೆ. ಅದರ ಆಧಾರದ ಮೇಲೆ 2-3 ದಿನಗಳಲ್ಲಿ ತೀರ್ಮಾನ ಕೈಗೊಳ್ಳಲಾಗುವುದು ಎಂದಿದ್ದಾರೆ.
ಪಠ್ಯ ಪರಿಷ್ಕರಣೆ ಬಗ್ಗೆ ಮಾತನಾಡಿದ ಅವರು, ಪಠ್ಯ ಪರಿಷ್ಕರಣೆ ಸಮಿತಿ ವಿಸರ್ಜನೆ ಮೊದಲ ಬಾರಿ ಆಗುತ್ತಿಲ್ಲ. ಸಿದ್ದರಾಮಯ್ಯ ಅವರು ಎಲ್ಲದರಲ್ಲೂ ರಾಜಕಾರಣ ಮಾಡುತ್ತಾರೆ ಎಂದಿದ್ದಾರೆ.
ರಾಜ್ಯದಲ್ಲಿ ಈ ಬಗ್ಗೆ ಹಲವಾರು ಬಾರಿ ಬದಲಾವಣೆಗಳಾಗಿವೆ. ಅವರ ಕಾಲದಲ್ಲಿಯೂ ಹೀಗೆ ಆಗಿದೆ. ಆಗೇನು ಅವರು ಪಠ್ಯ ಪುಸ್ತಕ ಪರಿಷ್ಕರಣೆ ಹಿಂದೆಗೆದುಕೊಂಡರೆ? ಸುಮ್ಮನೆ ಗೊಂದಲ ಸೃಷ್ಟಿ ಮಾಡಬಾರದು. ನಾವು ಈ ಬಗ್ಗೆ ಮುಕ್ತವಾಗಿದ್ದೇವೆ. ತಪ್ಪುಗಳನ್ನು ಸರಿಪಡಿಸಲು ಸಿದ್ಧರಿದ್ದೇವೆ. ಅದ್ಯಾವುದರ ಬಗ್ಗೆಯೇ ಆಗಲಿ ಸರಿಪಡಿಸಿ ಮರುಮುದ್ರಣ ಮಾಡಲಾಗುವುದು ಎಂದರು.
ಪೀರ್ ಪಾಷಾ ದರ್ಗಾ ಕುರಿತು ಸಂಶೋಧನೆ ಮಾಡಲುವಂತೆ ಸ್ವಾಮೀಜಿಗಳು ಮನವಿ ನೀಡಿದ್ದಾರೆ ಪುರಾತತ್ವ ಇಲಾಖೆ ಪರಿಶೀಲನೆ ನಡೆಸಲಿದೆ ಎಂದು ಮುಖ್ಯಮಂತ್ರಿ ಗಳು ತಿಳಿಸಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.